5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
2023–24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಸರ್ಕಾರ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.
ಇದೀಗ ಹೈಕೋರ್ಟ್ ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ಇದರಿಂದಾಗಿ ಈಗಾಗಲೇ ನಿಗದಿಯಾಗಿರುವಂತೆಯೇ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth