ದಿವ್ಯಾ ಹಾಗರಗಿ ಜೊತೆ ಡಿಕೆಶಿ ಇರುವ ಫೋಟೋ ಟ್ವೀಟ್ ಮಾಡಿದ ಬಿಜೆಪಿ
ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಇರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ ನೋಡಿ..!!! ಈ ಚಿತ್ರ ಏನು ಹೇಳುತ್ತದೆ? ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ! ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಪಿಎಸ್ ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ! ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಬಿಜೆಪಿ ಟ್ವೀಟ್ ಮಾಡಿರುವ ಚಿತ್ರ ಯಾವ ಸಂದರ್ಭದಲ್ಲಿ ತೆಗೆಸಿಕೊಂಡಿರುವುದು ಮತ್ತು ಚಿತ್ರದ ಹಿನ್ನೆಲೆ ಏನು ಎನ್ನುವುದು ತಿಳಿದು ಬಂದಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಮ್ಮದೇ ಸರ್ಕಾರದ ಆದೇಶಕ್ಕೆ ಬೆಲೆ ಕೊಡದ ಬಿಜೆಪಿ ಸಚಿವರು, ಮುಖಂಡರು
ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ: ನಳಿನ್ ಕುಮಾರ್ ಕಟೀಲ್
ಪಿಎಸ್ ಐ ಹಗರಣದಲ್ಲಿ ಗೃಹ ಸಚಿವರೇ ಶಾಮೀಲು: ಪ್ರಿಯಾಂಕ್ ಖರ್ಗೆ