ಡಿವೈಡರ್ ಗೆ ಕಾರು ಡಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ
ಬೈಂದೂರು: ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಿರಿಮಂಜೇಶ್ವರ ಬಳಿ ಬುಧವಾರ ಸಂಜೆ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ಆರ್.ವಿಜಯ್ ಅವರ ಪುತ್ರ ಅಕ್ಷಯ್ (23) ಎಂದು ಗುರುತಿಸಲಾಗಿದ್ದು, ತೇಜಸ್ (24), ಪವನ್ (23) ಮತ್ತು ಹರ್ಷ (24) ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಯುಸಿಯಲ್ಲಿ ಸಹಪಾಠಿಗಳಾಗಿದ್ದ ಈ ನಾಲ್ವರು ಫೆ.26ರಂದು ತೇಜಸ್ ಎಂಬವರಿಗೆ ಸೇರಿದ ಇನ್ನೋವಾ ಕಾರಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
ಕಾರವಾರ, ಗೋಕರ್ಣ ಮತ್ತಿತರ ಕಡೆ ಪ್ರವಾಸ ಕೈಗೊಂಡಿದ್ದ ಅವರು ಬುಧವಾರ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕಿರಿಮಂಜೇಶ್ವರ ಬಳಿ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಬಳಿಕ ಹೆದ್ದಾರಿಯ ಇನ್ನೊಂದು ಬದಿಗೆ ಹಾರಿದೆ. ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ಅಕ್ಷಯ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಯಿತು.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರೀತಿಸಿ ಮದುವೆಯಾದ ಯುವಕ ಆತ್ಮಹತ್ಯೆ: ಸತ್ತು ಮೂರು ದಿನವದರೂ ಕುಟುಂಬಸ್ಥರಿಗೆ ತಿಳಿಸದ ಪತ್ನಿ
ಕಂದಕಕ್ಕೆ ಉರುಳಿದ್ದ ಬೋಲೇರೋ ಜೀಪ್: ಸ್ಥಳದಲ್ಲೇ ಮಹಿಳೆ ಸಾವು
ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಆರೋಪಿಗಳ ಬಂಧನ
ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
ಕೀವ್ ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ, ದಯವಿಟ್ಟು ಸಹಾಯ ಮಾಡಿ: ಭಾರತೀಯ ವೈದ್ಯ ಕುಟುಂಬದ ಮನವಿ