ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನ ಆಕಾಂಕ್ಷಿಯಾದರೆ ತಪ್ಪೇನು?: ಸಿದ್ದರಾಮಯ್ಯ ಪ್ರಶ್ನೆ - Mahanayaka

ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನ ಆಕಾಂಕ್ಷಿಯಾದರೆ ತಪ್ಪೇನು?: ಸಿದ್ದರಾಮಯ್ಯ ಪ್ರಶ್ನೆ

seddaramaya
19/07/2022

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಕ್ಕಲಿಗರ ಸಭೆಯಲ್ಲಿ ಮಾತನಾಡಿ, ಎಸ್.ಎಂ. ಕೃಷ್ಣ ಬಳಿಕ ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶ ಒದಗಿ ಬಂದಿದ್ದು , ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದರು.

ಈ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಅವರು ತಮ್ಮ ಸಮುದಾಯದ ಮುಂದೆ ಹೇಳಿರುವುದಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದರೆ ಶಾಸಕರು ನಾಯಕನನ್ನು ಆಯ್ಕೆ ಮಾಡುತ್ತಾರೆ. ಬಳಿಕ ಹೈಕಮಾಂಡ್, ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ತೀರ್ಮಾನಿಸುತ್ತದೆ ಎಂದು ತಿಳಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ