ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ - Mahanayaka

ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ

school
18/07/2022

ಬೆಂಗಳೂರು: ತಮ್ಮ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೃಢಪಡಿಸಿದ್ದಾರೆ

ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ಬೆಳಗ್ಗೆ ನಮ್ಮ ಶಾಲೆಯಲ್ಲಿ ಸ್ಟಾಫ್, ಪ್ರಿನ್ಸಿಪಾಲ್ ಎಲ್ಲಾ ಶಾಲೆಗೆ ಹೋಗಿದ್ದಾರೆ. ಆಗ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಬೆದರಿಕೆ ಬಗ್ಗೆ ತಕ್ಷಣ ನಮಗೆ ತಿಳಿಸಿದರು ಎಂದರು.

ಸ್ಕೂಲ್ ಕ್ಯಾಂಪಸ್ ನಲ್ಲಿ ಇರುವವರನ್ನು ಸ್ಥಳಾಂತರ ಮಾಡಿದೆವು. ಕೂಡಲೇ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದೆವು. 70% ತಪಾಸಣೆ ಮಾಡಿದ್ದಾರೆ. ಇನ್ನೂ ತಪಾಸಣೆ ನಡೆಯುತ್ತಿದೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಪೋಷಕರು ಗಾಬರಿ ಆಗುವುದು ಬೇಡ. ನಮ್ಮಲ್ಲಿ ಹೈ ಸೆಕ್ಯೂರಿಟಿಯಿದೆ. ಪ್ರತಿ ಚಲನವಲನವೂ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುತ್ತದೆ. ನಿನ್ನೆ ಒಂದು ಪರೀಕ್ಷೆ ಇತ್ತು. ಹಾಗಾಗಿ ಬೇರೆಯವರು ಬರಲಿಕ್ಕೆ ಅವಕಾಶ ನೀಡಲಾಗಿತ್ತು. ಸಮಸ್ಯೆ ಆಗುವುದು ಬೇಡವೆಂದು ಪೊಲೀಸರಿಗೆ ತಿಳಿಸಿದೆವು. ಅವರು ನಾವೇ ಎಲ್ಲಾ ನೋಡಿಕೊಳ್ಳೋದಾಗಿ ಹೇಳಿದ್ದಾರೆ ಎಂದು ಘಟನೆ ಕುರಿತು ವಿವರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ