ಬ್ರೇಕಿಂಗ್ ನ್ಯೂಸ್ : ಇಂದು ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ದೂರು!?
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಇಂದು ಮತ್ತೋರ್ವ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಇಂದು ದೂರು ನೀಡಲಿದ್ದಾರೆ. ಸದಾಶಿವನಗರ ಠಾಣೆಗೆ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ನಂತರ ದೂರು ನೀಡಲಿದ್ದಾರೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಮತ್ತೆರಡು ಆಡಿಯೋ ಬಾಂಬ್ ಸಿಡಿಸಲಿದ್ದಾರೆ. ಕಿಂಗ್ ಪಿನ್ ಗಳು ಮತ್ತು ಡಿ.ಕೆ.ಶಿವಕುಮಾರ್ ಅವರದ್ದು ಎನ್ನಲಾಗಿರುವ ಆಡಿಯೋ ರಿಲೀಸ್ ಮಾಡಲಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ವಿಡಿಯೋ ಅಸ್ತ್ರ ಪ್ರಯೋಗಿಸಲಾಗಿದ್ದರೆ, ಇದೀಗ ಇದಕ್ಕೆ ಪ್ರತಿಯಾಗಿ ರಮೇಶ್ ಜಾರಕಿಹೊಳಿ ಆಡಿಯೋ ಬಾಂಬ್ ಹಾಕಲು ಸಿದ್ಧರಾಗಿದ್ದಾರೆ. ಒಟ್ಟಿನಲ್ಲಿ ರಾಜಕಾರಣಿಗಳ ಅನೈತಿಕ ಚಟುವಟಿಕೆಗಳಿಂದಾಗಿ ರಾಜ್ಯದ ಅಭಿವೃದ್ಧಿ ವಿಚಾರವನ್ನು ಜನರು ಮರೆತು ಹೋದಂತಾಗಿದೆ.
ರಮೇಶ್ ಜಾರಕಿಹೊಳಿಯ ದೃಶ್ಯ ಮಾತ್ರವಲ್ಲ, ಮಾತು ಕೂಡ ಅಶ್ಲೀಲ | ಕಾಂಗ್ರೆಸ್ ತಿರುಗೇಟು