ಜೈಲಿಗೆ ಹೋಗಿ ಬಂದ ಬಳಿಕ ಡಿಕೆಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ | ಸಿ.ಪಿ.ಯೋಗೇಶ್ವರ್ - Mahanayaka

ಜೈಲಿಗೆ ಹೋಗಿ ಬಂದ ಬಳಿಕ ಡಿಕೆಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ | ಸಿ.ಪಿ.ಯೋಗೇಶ್ವರ್

d k shivakumar vs c p yogeshwar
07/06/2021

ಬೆಂಗಳೂರು:  ತಿಹಾರ್ ಜೈಲಿಗೆ ಹೋಗಿ ಬಂದ ಬಳಿಕ ಡಿ.ಕೆ.ಶಿವಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದು, ತಮ್ಮ ಪಕ್ಷವನ್ನು ಬಿಟ್ಟು ನಮ್ಮ ಪಕ್ಷಕ್ಕೆ ಬಂದು ಕಾರ್ಯಕರ್ತರಾಗಿ ದುಡಿಯಿರಿ ಎಂದು ಆಹ್ವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಿ.ಪಿ.ಯೋಗೇಶ್ವರ್ ಅವರ ಮಠ ಭೇಟಿ ಕಾರ್ಯಕ್ರಮಗಳ ಬಗ್ಗೆ ಮಾತನಾಡುತ್ತಾ,  ಮಠಗಳಿಗೆ  ಲ್ಯಾಪ್ ಟಾಪ್ ತೆಗೆದುಕೊಂಡು ಹೋಗಿ ಸಿಡಿ ತೋರಿಸಿ ಬರುತ್ತಿದ್ದಾರೆ ಎಂದು ಆರೋಪಿಸಿದ ವರದಿಯ ಬೆನ್ನಲ್ಲೆ, ಸಿಪಿ ಯೋಗೇಶ್ವರ್ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಿಡಿ ಸಂಸ್ಕೃತಿಯನ್ನು ಡಿ.ಕೆ.ಶಿವಕುಮಾರ್ ಅವರಿಂದಲೇ ಕೇಳಿ. ನನ್ನನ್ನು ಸಮಾಜದಲ್ಲಿ ಕಳಂಕಿತನನ್ನಾಗಿ ಮಾಡಲು ಪ್ರಯತ್ನ ಮಾಡಿದ್ದಾರೆ. ನಾನು ಸುತ್ತೂರು ಮಠಕ್ಕೆ ಹೋಗಿದ್ದೆ, ಆದಿಚುಂಚನಗಿರಿ ಮಠಕ್ಕೂ ಹೋಗಿ ಬಂದಿದ್ದೆ. ತಿಹಾರ್ ಜೈಲಿಗೆ ಹೋಗಿ ಬಂದಿರುವ ಡಿಕೆಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿ.ಪಿ.ಯೋಗೇಶ್ವರ್ ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿ