ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಡಿಕೆಶಿ ರಾಜೀನಾಮೆ ನೀಡಬೇಕು: ಆರ್.ಅಶೋಕ್ ಕಿಡಿ

24/03/2025
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡಲು ಅಗತ್ಯ ಬಿದ್ದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಬಗ್ಗೆ ಡಿ.ಕೆ.ಶಿವಕುಮಾರ್ ಮಾತನಾಡಿ ಬಳಿಕ ಯುಟರ್ನ್ ಹೊಡೆದಿದ್ದಾರೆ. ಅತೀ ಹೆಚ್ಚು ಸಂವಿಧಾನ ಬದಲಾವಣೆ ಮಾಡಿದ್ದು ಕಾಂಗ್ರೆಸ್ ಪಕ್ಷ, ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು ತಪ್ಪು ಎಂದರು.
ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: