ಬಾಣಂತಿಯ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ ಹಾಕಿದ ವೈದ್ಯರು!

GIMS Hospital–ಕಲಬುರಗಿ: ಸಿಸೇರಿಯನ್ ಮಾಡುವ ವೇಳೆ ಮಹಿಳೆಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ವೈದ್ಯರು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು ಸಿಸೇರಿಯನ್ ಮಾಡಿಸಲಾಗಿತ್ತು. ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ಹೊಟ್ಟೆಯಲ್ಲೇ ಬಟ್ಟೆಯ ಉಂಡೆ ಮತ್ತು ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ಇದರ ಪರಿಣಾಮ ಶಸ್ತ್ರ ಚಿಕಿತ್ಸೆ ನಡೆದು ಒಂದು ವಾರದ ಬಳಿಕ ಮಹಿಳೆಗೆ ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿದ ವೇಳೆ ವೈದ್ಯರ ಯಡವಟ್ಟು ಬೆಳಕಿಗೆ ಬಂದಿದೆ.
ಬಳಿಕ ಅಫಜಲಪುರ ಕರಜಗಿ ಗ್ರಾಮದ ಪ್ರಾಥಮಿಕ ಕೇಂದ್ರಕ್ಕೆ ತೆರಳಿ ವೈದ್ಯರಿಂದ ಮರು ಶಸ್ತ್ರ ಚಿಕಿತ್ಸೆ ಮಾಡಿಸಿ, ಹೊಟ್ಟೆಯಲ್ಲಿದ್ದ ಬಟ್ಟೆ ಉಂಡೆ ಹಾಗೂ ಹತ್ತಿ ಹೊರ ತೆಗೆಯಲಾಗಿದೆ.
ಇನ್ನೂ ಮಹಿಳೆಯ ಕುಟುಂಬಸ್ಥರ ಆರೋಪವನ್ನು ಜಿಮ್ಸ್ ವೈದ್ಯರು ತಳ್ಳಿ ಹಾಕಿದ್ದಾರೆ. ಹೆರಿಗೆ ನಂತರ ರಕ್ತಸ್ರಾವ ತಡೆಯಲು ಪ್ಯಾಡ್ ಇಡಾಗಿದೆ. 3 ದಿನಗಳ ನಂತರ ಬಂದು ತೆಗೆಸುವಂತೆ ಹೇಳಲಾಗಿತ್ತು. ಆದರೆ ಅವರು ಬಂದಿರಲಿಲ್ಲ. ಮಹಿಳೆಗೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.
ಬಾಣಂತಿ ಹಾಗೂ ವೈದ್ಯರ ನಡುವಿನ ಕಮ್ಯುನಿಕೇಶನ್ ಗ್ಯಾಪ್ ನಿಂದ ಹೀಗಾಗಿದೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ ಎಂದು ಕಲಬುರಗಿ ಡಿಹೆಚ್ ಒ ಡಾ.ಶರಣಬಸಪ್ಪ ಕ್ಯಾತನಾಳ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: