ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಯುವತಿಗೆ ಹಲ್ಲೆ ನಡೆಸಿದ ಮ್ಯಾನೇಜರ್ ಅರೆಸ್ಟ್ - Mahanayaka
9:21 AM Wednesday 5 - February 2025

ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಯುವತಿಗೆ ಹಲ್ಲೆ ನಡೆಸಿದ ಮ್ಯಾನೇಜರ್ ಅರೆಸ್ಟ್

dominos pizza maneger arreted
08/08/2021

ಬೆಂಗಳೂರು: ಬಸವನಗುಡಿ ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಮ್ಯಾನೇಜರ್ ವೋರ್ವ ಯುವತಿಯೋರ್ವಳಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 ಬಸವನಗುಡಿಯ ಡಾಮಿನೊಸ್ ಪಿಜ್ಜಾ ಮಳಿಗೆಯ ಮ್ಯಾನೇಜರ್ ಎನ್ನಲಾಗಿರುವ ಆರೋಪಿ ಪುರುಷೋತ್ತಮ್ ಬಂಧಿತ ಆರೋಪಿಯಾಗಿದ್ದಾನೆ. ಈತ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಒನ್ ಸೈಡ್ ಲವ್ ಮಾಡುತ್ತಿದ್ದ. ಈ ವಿಚಾರವನ್ನು ಯುವತಿಗೆ ಆತ ತಿಳಿಸಿದಾಗ, ಆಕೆ ಆತನ ಪ್ರೀತಿಯನ್ನು ನಿರಾಕರಿಸಿದ್ದಳು.

ಯುವತಿಯು ಬೇರೊಂದು ಯುವಕನನ್ನು ಪ್ರೀತಿಸುತ್ತಿದ್ದ ಕಾರಣ, ಪುರುಷೋತ್ತಮ್ ನ ಪ್ರೀತಿಯನ್ನು ಒಪ್ಪಿರಲಿಲ್ಲ. ತನ್ನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಪುರುಷೋತ್ತಮ್ ಯುವತಿಯ ಮೇಲೆ ದ್ವೇಷ ಸಾಧಿಸಲು ಆರಂಭಿಸಿದ್ದ. ಆಕೆ ಮಾಡುತ್ತಿದ್ದ ಕೆಲಸಗಳಲ್ಲಿ ವಿನಾ ಕಾರಣ ತಪ್ಪುಗಳನ್ನು ಹುಡುಕಿ ಎಲ್ಲ ಕೆಲಸಗಾರರ ಎದುರು ಅವಮಾನಿಸುತ್ತಿದ್ದ ಎಂದು ಹೇಳಲಾಗಿದೆ.

ಇನ್ನೂ ಘಟನೆ ನಡೆದ ದಿನವೂ ವಿನಾ ಕಾರಣ ಯುವತಿಯೊಂದಿಗೆ ತಗಾದೆ ತೆಗೆದಿದ್ದ ಪುರುಷೋತ್ತಮ್ ಎಲ್ಲ ಕೆಲಸಗಾರರ ಎದುರಲ್ಲಿಯೇ ಆಕೆಯ ಕಪಾಳಕ್ಕೆ ಬಾರಿಸಿದ್ದ. ಈತನ ಏಟಿಗೆ ಯುವತಿ ಕುಸಿದು ನೆಲಕ್ಕೆ ಬಿದ್ದಿದ್ದಾಳೆ. ಈ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿತ್ತು.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ತುಳುನಾಡಿನ ದೈವ ಕೊರಗಜ್ಜನ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿದ ಕಿಡಿಗೇಡಿಗಳು!

ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಮದ್ಯವ್ಯಸನಿ ತಂದೆ!

ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಯುವತಿ ಮಾಡಿದ ಕೆಲಸ ಏನು ಗೊತ್ತಾ? | ವಿಡಿಯೋ ವೈರಲ್

ನನ್ನ ಸ್ನೇಹಿತರ ಲೈಂಗಿಕ ಬಯಕೆ ತೀರಿಸು ಎಂದು ಪ್ರಿಯಕರನಿಂದಲೇ ಬ್ಲ್ಯಾಕ್ ಮೇಲ್ | 40 ಅಡಿ ಎತ್ತರದಿಂದ ನದಿಗೆ ಹಾರಿದ ಯುವತಿ!

ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಕಾರಿನಲ್ಲೇ ಅತ್ಯಾಚಾರ | ಬಾಡಿಗೆ ಮನೆ ಮಾಲಿಕನಿಂದ ಕೃತ್ಯ

 

ಇತ್ತೀಚಿನ ಸುದ್ದಿ