ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಭೀಕರ ಹತ್ಯೆ - Mahanayaka
10:23 PM Thursday 19 - September 2024

ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಭೀಕರ ಹತ್ಯೆ

crime news
02/03/2022

ಬೆಂಗಳೂರು: ಕುಡಿದ ಮತ್ತಿನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಫ್ರೆಂಡ್ಸ್ ಬಾರ್ ಬಳಿ ನಡೆದಿದೆ. ಮೋಹನ್ ಅಲಿಯಾಸ್​ ಮುಂಗುಸಿ (45) ಮೃತ ವ್ಯಕ್ತಿ. ಮರತ ವ್ಯಕ್ತಿ ಬಾರ್ ಬೆಂಡರ್ ಕೆಲಸ ಮಾಡಿಕೊಂಡಿದ್ದು, 18ವರ್ಷಗಳಿಂದ ಬಾಗಲಗುಂಟೆಯಲ್ಲಿ ವಾಸವಾಗಿದ್ದು, ಎಂದಿನಂತೆ ಕೆಲಸ ಮುಗಿಸಿಕೊಂಡು ಬಾರ್​ಗೆ ಹೋಗಿದ್ದಾರೆ.

ಈ ವೇಳೆ ಮೋಹನ್, ಪವನ್, ಕಿಶೋರ್, ಮತ್ತೋರ್ವ ಸೇರಿ ನಾಲ್ವರ ಮಧ್ಯೆ ಜಗಳ ಆರಂಭವಾಗಿದೆ. ಗಲಾಟೆ ಅತಿರೇಕಕ್ಕೇರಿದ್ದು, ಉಳಿದ ಮೂವರು ಮೋಹನ್‌ನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಪ್ರಕರಣದ ಆರೋಪಿ ಕಿಶೋರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನುಳಿದ ಇಬ್ಬರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಈ ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ನದಿನೀರು ಪಾಲು

ಕೇಂದ್ರ ಸಚಿವ ಭಗವಂತ ಖೂಬಾ ವಾಹನದ ಮೇಲೆ ಕಲ್ಲು ತೂರಾಟ

ಎರಡೂವರೆ ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ

ಜಾರ್ಖಂಡ್ ದೋಣಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು

ಫುಡ್ ಡೆಲಿವರಿ ಬಾಯ್ ಅಪಹರಣ: 6 ಮಂದಿ ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ