ಶಬರಿಮಲೆ ಯಾತ್ರೆ ವೇಳೆ ಮಸೀದಿಗಳಿಗೆ ಭೇಟಿ ನೀಡಬೇಡಿ: ಬಿಜೆಪಿ ಶಾಸಕ ರಾಜಾ ಸಿಂಗ್ ವಿವಾದಾತ್ಮಕ ಹೇಳಿಕೆ
ಕೇರಳದ ಶಬರಿಮಲೆಗೆ ಭೇಟಿ ನೀಡುವ ಅಯ್ಯಪ್ಪ ಭಕ್ತರು ತಮ್ಮ ತೀರ್ಥಯಾತ್ರೆಯ ಸಮಯದಲ್ಲಿ ಯಾವುದೇ ಮಸೀದಿಗಳಿಗೆ ಹೋಗಬಾರದು ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಕ್ತರು ‘ಅಯ್ಯಪ್ಪ ದೀಕ್ಷೆ’ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಅವರು ಮಸೀದಿಗೆ (ವಾವರ್) ಹೋದರೆ ಅವರು ಅಶುದ್ಧರಾಗುತ್ತಾರೆ ಎಂದು ಸಿಂಗ್ ವಿವಾದ ಸೃಷ್ಟಿಸಿದ್ದಾರೆ.
ಭಕ್ತರನ್ನು ಮಸೀದಿಗೆ ಭೇಟಿ ನೀಡುವಂತೆ ಮಾಡುವುದು ಪಿತೂರಿ ಎಂದು ಗೋಶಾಮಹಲ್ ಶಾಸಕರು ಹೇಳಿದರು.
ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಎ.ರೇವಂತ್ ರೆಡ್ಡಿ ಮತ್ತು ಎನ್.ಚಂದ್ರಬಾಬು ನಾಯ್ಡು ಅವರು ಭಕ್ತರಿಗೆ ವಸತಿ ನಿರ್ಮಿಸಲು 10 ಎಕರೆ ಭೂಮಿಯನ್ನು ಕೋರಿ ಕೇರಳ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj