ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ, ನಗದು ಕಳವು: ಆರೋಪಿಗಳ ಬಂಧನ
ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
15-01-2023 ರಂದು ಸಂಜೆ 18-30 ಗಂಟೆಯಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09:00 ಗಂಟೆಯ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬುವವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು.
ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು. ಈ ಕ್ಷಿಷ್ಟಕರವಾದ ಹಾಗೂ ಯಾವುದೇ ಸುಳಿವು ಇಲ್ಲದ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿ ಈ ಪ್ರಕರಣದಲ್ಲಿ ಭಾಗಿಯಾದ ಗಣೇಶ ನಾಯ್ಕ್(26) ಹಾಗೂ ರಂಜಿತ್ ಕೆ.ಆರ್(26) ಎಂಬುವವರನ್ನು ದಸ್ತಗಿರಿ ಮಾಡಿ ಅವರ ವಶದಿಂದ ಕಳವುಗೈದ ಸೊತ್ತುಗಳ ಪೈಕಿ ಒಟ್ಟು 1 ಕೆಜಿ ವಿವಿಧ ನಮೂನೆಯ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ 55 ಲಕ್ಷ ಆಗಬಹುದು. ಅಲ್ಲದೇ ಆರೋಪಿಗಳ ವಶದಿಂದ 2 ಮೊಬೈಲ್ ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 56,50,000 ಆಗಬಹುದು. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಈ ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಹಾಗೂ ಇತರ ಇಬ್ಬರು ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯೊಂದರ ಬಾಗಿಲಿನ ಬೀಗವನ್ನು ಒಡೆದು ಮನೆಯಲ್ಲಿನ ಬೆಲೆಬಾಳುವ ಸೊತ್ತುಗಳನ್ನು ಹಾಗೂ ಮಾರುತಿ ಬ್ರೀಝಾ ಕಾರನ್ನು ಕಳವುಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ಈ ಪ್ರಕರಣವು ಕೂಡಾ ಪತ್ತೆಯಾಗಿದೆ. ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಈ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ,ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ ಐಯವರಾದ ಶಶಿಧರ ಶೆಟ್ಟಿ, ಹರೀಶ್,ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw