ಬೆಳ್ತಂಗಡಿ: ಹೆದ್ದಾರಿಗಳ ತುರ್ತು ದುರಸ್ತಿಗೆ 1 ಕೋಟಿ ರೂ.: ಡಾ.ಹೆಗ್ಗಡೆಯವರ ಮನವಿಗೆ ಸಿಎಂ ಸ್ಪಂದನೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರ ಮುಖೇನ ಮನವಿ ಮಾಡಿದ್ದಾರೆ.
ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73 ಗುರುವಾಯನಕೆರೆಯಿಂದ ಉಜಿರೆ ತನಕದ ರಸ್ತೆ ಹಾಗೂ ಕೇಂದ್ರ ಸರ್ಕಾರದಿಂದ ಸ್ಪಾರ್ ರಸ್ತೆಯಾಗಿ ಘೋಷಣೆಯಾಗಿರುವ ಪೆರಿಯಶಾಂತಿಯಿಂದ ಧರ್ಮಸ್ಥಳವರೆಗಿನ ರಸ್ತೆ ತೀರಾ ಹದಗೆಟ್ಟಿದ್ದು, ಇದರಲ್ಲಿ ವಾಹನ ಸಂಚಾರ ಕಷ್ಟವಾಗಿದೆ. ಈ ರಸ್ತೆ ಸರಿಪಡಿಸಲು ಒಂದು ಕೋಟಿ ರೂ. ರಾಷ್ಟ್ರೀಯ ಹೆದ್ದಾರಿಯ ಮಂಗಳೂರು ವಿಭಾಗಕ್ಕೆ ಬಿಡುಗಡೆ ಮಾಡುವಂತೆ ವಿನಂತಿ ಮಾಡಿದ್ದಾರೆ.
ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿಯವರು ರೂ. 1 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಗುರುವಾಯನಕೆರೆಯಿಂದ ಉಜಿರೆಯ ವರೆಗಿನ ರಾಷ್ಟ್ರೀಯ ಹೆದ್ದಾರಿ ಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟ ಸಾಧ್ಯವಾಗಿತ್ತು. ರಸ್ತೆ ದುರಸ್ತಿಗೆ ಒತ್ತಾಯಿಸಿ ನಿರಂತರ ಪ್ರತಿಭಟನೆಗಳೂ ನಡೆದಿದ್ದವು ಇದೀಗ ಡಾ ಹೆಗ್ಗಡೆಯವರ ಮನವಿಯಂತೆ ಅನುದಾನ ಮಂಜೂರಾಗಿದ್ದು ಇದೀಗ ರಸ್ತ ದುರಸ್ತಿಯಾಗಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka