ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಪ್ರಿಯಾಂಕ್ ಖರ್ಗೆ - Mahanayaka

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಪ್ರಿಯಾಂಕ್ ಖರ್ಗೆ

priyank kharge
26/09/2022

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಹುಟ್ಟು ಹಬ್ಬವನ್ನು ಇಂದು ಆಚರಿಸಲಾಗುತ್ತಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಅವರು ಡಾ.ಸಿಂಗ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಸತತವಾಗಿ 2 ಬಾರಿ ದೇಶದ ಪ್ರಧಾನಿಗಳಾಗಿ, ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ

ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಪ್ರಿಯಾಂಕ್ ಖರ್ಗೆ ಶುಭ ಹಾರೈಸಿದ್ದಾರೆ.

ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ ಯೋಜನೆಗಳು ದೇಶದ ಕೋಟ್ಯಾಂತರ ಜನರ ಬಡತನವನ್ನು ನೀಗಿಸಿತು. RTE ಬಡ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು.   RTI ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದಿತು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶವು ಗರಿಷ್ಠ‌ GDP ದಾಖಲಿಸಿತು ಎಂದು ಅವರು ತಿಳಿಸಿದರು.

ಒಂದು ದಶಕದ ಕಾಲ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಈ ಮಹಾನ್ ನಾಯಕನಿಗೆ ಮತ್ತೊಮ್ಮೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತೇನೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ