ಡ್ರ್ಯಾಗನ್ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ರಾಮನಗರ: ಡ್ರ್ಯಾಗನ್ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ರಾಮನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಗಂಟಪ್ಪ ಕೊಲೆಯಾದ ಕಾಂಗ್ರೆಸ್ ಮುಖಂಡ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕೊಲೆ ಮಾಡಲಾಗಿದೆ.
ಗಂಟಪ್ಪ ಅವರ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.
ಈ ಘಟನೆ ಸಂಬಂಧ ಬಿಡದಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಕ್ರೇನ್ ಸೇನೆಯಿಂದ ರಷ್ಯಾದ ಇಬ್ಬರು ಸೈನಿಕರ ಸೆರೆ
ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವು
ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ
ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು