ಪಾಠ ಕೇಳುವ ಮಕ್ಕಳು ನೀರು ಹೊರುವ ದುಸ್ಥಿತಿ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಮಕ್ಕಳಿಗೆ ತೊಂದರೆ - Mahanayaka

ಪಾಠ ಕೇಳುವ ಮಕ್ಕಳು ನೀರು ಹೊರುವ ದುಸ್ಥಿತಿ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಮಕ್ಕಳಿಗೆ ತೊಂದರೆ

sunkasale
06/03/2023

ಕೊಟ್ಟಿಗೆಹಾರ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಶಾಲೆಯೊಂದಕ್ಕೆ ಕುಡಿಯುವ ನೀರು ಸಿಗದೇ ಶಾಲಾ ಮಕ್ಕಳು, ಪೋಷಕರು ನೀರು ಹೊರುವಂತಾಗಿರುವ ಸ್ಥಿತಿ ನಿರ್ಮಾಣವಾಗಿದೆ.

ಸುಂಕಸಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ಪೂರೈಕೆ ಮಾಡುವ ಪೈಪ್‍ ಲೈನ್ ಹಾಳಾಗಿರುವುದರಿಂದ ಶಾಲೆಗೆ ನೀರಿನ ಪೂರೈಕೆಯೇ ಇಲ್ಲದಂತಾಗಿದೆ. ಇದರಿಂದಾಗಿ ಶಾಲಾ ಮಕ್ಕಳು, ಕೆಲ ಮಕ್ಕಳ ಪೋಷಕರು, ಅಡುಗೆ  ಸಿಬ್ಬಂದಿಗಳು ಸುಮಾರು ಅರ್ಧ ಕಿ.ಮೀ. ದೂರದ ನಲ್ಲಿಯಿಂದ ನೀರು ತರುವಂತಾಗಿದೆ.

ಈ ಬಗ್ಗೆ ಗ್ರಾಮಸ್ಥರಾದ ಕೃಷ್ಣ ಮಾತನಾಡಿ, 2015 ರಿಂದ ಇದುವರೆಗೆ ಹಲವಾರು ಬಾರಿ ಶಾಲೆಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮಾಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕುಡಿಯುವ ನೀರಿನ ಸಮಸ್ಯೆಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಗ್ರಾ.ಪಂ ಮುಂಭಾಗ ವಿದ್ಯಾರ್ಥಿಗಳು, ಪೋಷಕರು, ಶಾಲಾ ಸಮಿತಿ ಪದಾಧಿಕಾರಿಗಳು ಸೇರಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಡಿಡಿಪಿಐ ರಂಗನಾಥ್ ಅವರು, ಶಾಲೆಗೆ ಕುಡಿಯುವ ನೀರು ಪೂರೈಕೆ ಮಾಡುವುದು ಆಯಾ ಗ್ರಾ.ಪಂ. ಕಾರ್ಯವಾಗಿದೆ. ಈ ಬಗ್ಗೆ ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದು ತಿಳಿಸಿದ್ದಾರೆ.


“ಸುಂಕಸಾಲೆ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸ್ಥಳೀಯ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು”

–ಹರ್ಷಕುಮಾರ್ ತಾ.ಪಂ ಇಓ.


ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ