ಬೇಸಿಗೆ ಅಂತ್ಯದವರೆಗೆ ಕುಡಿಯುವ ನೀರಿಗೆ ತೊಂದರೆ

ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ 04.05.2023 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿರುತ್ತದೆ.
ಈ ಬಗ್ಗೆ ಸಾಧಕ ಭಾದಕಗಳನ್ನು ಪರಿಶೀಲಿಸಿ ಜಿಲ್ಲಾಡಳಿತದ ಸಭೆಯಲ್ಲಿ ಈ ಕೆಳಗಿನಂತೆ ನಿರ್ಣಯಗಳನ್ನು ಕೈಗೊಳ್ಳಲಾಗಿರುತ್ತದೆ.
ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ (Alternative Days) ನೀರು ಬಿಡಲು ನಿರ್ಣಯಿಸಲಾಗಿದೆ.
2. ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು.
ದಿನಾಂಕ 05.05.2023 ರಂದು ಮಂಗಳೂರು ನಗರ ಉತ್ತರಕ್ಕೆ, ದಿನಾಂಕ 06.05.2023 ರಂದು ಮಂಗಳೂರು ನಗರ ದಕ್ಷಿಣ, ನಂತರ ಕ್ರಮಾನುಗತವಾಗಿ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿರುತ್ತದೆ.
ಲಭ್ಯವಿರುವ ನೀರನ್ನು ಮೇಲೆ ತಿಳಿಸಿದಂತೆ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ಮೇಲಿನ ವಿಷಯವನ್ನು ಮನಗಂಡು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw