ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರ್: ಮೂವರು ಗಾಯಗೊಂಡು ಆಸ್ಪತ್ರೆಗೆ ರವಾನೆ

car accident
08/03/2025

ಮೂಡಿಗೆರೆ: ಮೂಡಿಗೆರೆ ತಾಲ್ಲೂಕಿನ ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಇಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ.

ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಸುದ್ಧಿ ತಿಳಿದು ಸ್ಥಳೀಯರು ಕೂಡ ಕೂಡಲೇ ನೆರವಿಗೆ ಧಾವಿಸಿದ್ದರು.

ಈ ಅಪಘಾತಕ್ಕೆ ನಿಖರವಾದ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ

Exit mobile version