ಚಾಲಕನ ನಿಯಂತ್ರಣ ತಪ್ಪಿ ಚರಂಡಿ ವಾಲಿದ ಪೆಟ್ರೋಲ್ ಟ್ಯಾಂಕರ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪೆಟ್ರೋಲ್ ಟ್ಯಾಂಕರ್ ವೊಂದು ಚರಂಡಿಗೆ ವಾಲಿ ನಿಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಅಜ್ಜಂಪುರ ಗೆ ತೆರಳುತ್ತಿದ್ದ ಪೆಟ್ರೋಲ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 73ರ ಕೊಟ್ಟಿಗೆಹಾರ ಪಟ್ಟಣದ ಸ್ವಲ್ಪ ದೂರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದೆ.
ಸ್ವಲ್ಪ ಹೆಚ್ಚು ಕಡಿಮೆ ಆಗ್ತಾ ಇದ್ದಿದ್ರೆ ಸಾವಿರಾರು ಲೀಟರ್ ಪೆಟ್ರೋಲ್ ಚರಂಡಿ ಪಾಲಾಗುತ್ತಿತ್ತು. ಆದರೆ ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw