ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು - Mahanayaka

ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು

drone prathap
23/12/2024

ತುಮಕೂರು:  ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರಾಗಿದೆ.

ಮಧುಗಿರಿ ಜೆಎಂಎಫ್ ಸಿ ಕೋರ್ಟ್ ಪ್ರತಾಪ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಭಾಗ್ಯ ಸಿಕ್ಕಿದರೂ  ಪ್ರತಾಪ್ ಗೆ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಗಿಲ್ಲ. ಜಾಮೀನು ಪ್ರಕ್ರಿಯೆ ಮುಗಿಯಲು ಇನ್ನೂ ಎರಡು ದಿನಗಳು ಬೇಕಾಗುವುದರಿಂದ 2 ದಿನ ಪ್ರತಾಪ್ ಜೈಲಿನಲ್ಲಿ ಕಳೆಯಬೇಕಿರುವುದು ಅನಿವಾರ್ಯ.

ಮಧುಗಿರಿಯ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಪ್ರತಾಪ್ ಸೋಡಿಯಂ ಬಾಂಬ್ ಸ್ಫೋಟಿಸಿ ಯಡವಟ್ಟು ಮಾಡಿಕೊಂಡಿದ್ದ. ಈ ವಿಡಿಯೋ ವ್ಯಾಪಕ ವೈರಲ್ ಆದ ಬೆನ್ನಲ್ಲೇ ಬೆಂಗಳೂರಿನಿಂದ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ