ಡ್ರಗ್ಸ್ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರದ್ದೇ ದೊಡ್ಡಪಾಲು | ಪ್ರಿಯಾಂಕ್ ಖರ್ಗೆ
ಕಲಬುರ್ಗಿ: ಲಾಕ್ ಡೌನ್ ಅವಧಿಯಲ್ಲಿ ದೇಶದಲ್ಲಿ ‘ಡ್ರಗ್ಸ್’ ಬಳಕೆ ಮೂರುಪಟ್ಟು ಹೆಚ್ಚಾಗಿದೆ ಎಂದು ಆರೆಸ್ಸೆಸ್ ಮುಖಂಡ ಮೋಹನ ಭಾಗವತ್ ಅವರೇ ಹೇಳಿದ್ದಾರೆ. ಈ ಬಗ್ಗೆ ಗೃಹಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸುವ ತಾಕತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಇದೆಯೇ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಚಟುವಟಿಕೆ ಬಿಟ್ಟರೆ ಉಳಿದೆಲ್ಲವೂ ಬಂದ್ ಆಗಿತ್ತು. ಹಾಗಾದರೆ ನಕಲಿ ವಸ್ತುಗಳು ಹೇಗೆ ಸರಬರಾಜಾದವು? ಅಮಿತ್ ಶಾ ಒಬ್ಬ ಅಸಮರ್ಥ ಮಂತ್ರಿ ಎಂದು ಮೋಹನ ಭಾಗವತ್ ಅವರ ಹೇಳಿಕೆಯೇ ದೃಢಪಡಿಸುತ್ತದೆ ಎಂದು ಅವರು ಟೀಕಿಸಿದರು.
ರಾಹುಲ್ ಗಾಂಧಿ ಅವರನ್ನು ಡ್ರಗ್ ಪೆಡ್ಲರ್ ಎಂದು ಟೀಕಿಸಿರುವ ಕಟೀಲ್, ಒಮ್ಮೆಯಾದರೂ ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುವಂಥ ಧೈರ್ಯ ತೋರಲಿ ಎಂದು ಅವರು ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ದ ಹರಿಹಾಯ್ದರು.
ದೇಶದ ವಿವಿಧೆಡೆ ನಡೆದ ‘ಡ್ರಗ್ಸ್’ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರೂ ಬಂಧನವಾಗಿದ್ದಾರೆ. ಗುಜರಾತ್ ರಾಜ್ಯದಲ್ಲಿ ರೂ.1.75 ಲಕ್ಷ ಕೋಟಿ ಮೌಲ್ಯದ 25 ಸಾವಿರ ಕೆ.ಜಿ ಹೆರಾಯಿನ್ ಪತ್ತೆಯಾಗಿದೆ. ಮೋದಿ ಅವರ ಆಪ್ತ ಅದಾನಿಯ ಖಾಸಗಿ ಬಂದರಿನಲ್ಲಿ 3,000 ಕೆ.ಜಿ ಕೊಕೇನ್ ಸಿಕ್ಕಿದೆ. ಇದರ ಬೆಲೆ ರೂ. 21 ಸಾವಿರ ಕೋಟಿ. ಇದೆಲ್ಲ ಸರಬರಾಜು ಆಗುತ್ತಿರುವುದು ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದಿಂದ ಎಂಬುದೂ ದೃಢಪಟ್ಟಿದೆ. ಕೇಂದ್ರ ಸರ್ಕಾರವೇ ಈ ಆರೋಪಿಗಳ ರಕ್ಷಣೆಗೆ ನಿಂತಿದೆ ಎಂದು ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ
ಮೋದಿ ಅವರ ಶಿಕ್ಷಣದ ಬಗ್ಗೆ ಆರ್ ಟಿಐನಲ್ಲೂ ದಾಖಲೆ ಕೊಡುತ್ತಿಲ್ಲ. ಹಾಗಾಗಿ, ಅವರನ್ನು ‘ಹೆಬ್ಬೆಟ್ಟು’ ಎಂದು ಕಾಂಗ್ರೆಸ್ ಟೀಕಿಸಿದೆ. ಅದು ಅಸಾಂವಿಧಾನಿಕ ಪದವಲ್ಲ. ಆದರೆ, ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಕಟೀಲ್ ಅವರಂಥ ತಲೆಕೆಟ್ಟ ಮುಖಂಡರು ಕಾಂಗ್ರೆಸ್ ನಾಯಕರ ತೇಜೋವಧೆ ಮಾಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಿಯಾಂಕ್ ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಬಂಧಿಸಲು ಹೋದ ಪೊಲೀಸರಿಗೆ ತಲ್ವಾರ್ ತೋರಿಸಿ ಪರಾರಿಯಾದ ರೌಡಿಶೀಟರ್!
ಹೋಮ್ ವರ್ಕ್ ಮಾಡಲಿಲ್ಲ ಎಂದು ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ
ಅಫ್ಘಾನಿಸ್ತಾನ: ವಾಲಿಬಾಲ್ ಆಟಗಾರ್ತಿಯ ಶಿರಚ್ಚೇದನ ನಡೆಸಿದ ತಾಲಿಬಾನಿಗಳು
ಸಾರ್ವಜನಿಕ ಸ್ಥಳಗಳಲ್ಲಿ ತಲ್ವಾರ್ ಪ್ರದರ್ಶಿಸಿದ ಸಂಘ ಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ
ನಿರ್ಲಜ್ಜ, ನೀಚ ರಾಜಕಾರಣಿಗಳ ಬದಲು ಹಿಂದೂ ಸಂಘಟನೆಗಳಿಗೆ ಬಲ ತುಂಬಿ: ಬಿಜೆಪಿ ವಿರುದ್ಧ ಮುತಾಲಿಕ್ ಪರೋಕ್ಷ ಕಿಡಿ
65 ಸಾವಿರ ರೂ.ಗಳ ಹಳೆಯ ನೋಟನ್ನು ಬದಲಿಸಿಕೊಡುವಂತೆ ಜಿಲ್ಲಾಧಿಕಾರಿ ಮೊರೆ ಹೋದ ದೃಷ್ಟಿಹೀನ ವಿಕಲಚೇತನ!
ಮೀನು ಸಾಗಾಟದ ಟೆಂಪೋ, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು