ತುಮಕೂರು: ಡಿಎಸ್ ಎಸ್ ಮುಖಂಡನನ್ನು ಕೊಚ್ಚಿ ಬರ್ಬರ ಹತ್ಯೆ
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಿ.ಎಸ್. ರಸ್ತೆಯಲ್ಲಿ ಬುಧವಾರ ಸಂಭವಿಸಿದೆ.
ಗುಬ್ಬಿ ತಾಲೂಕು ಡಿಎಸ್ ಎಸ್ ಸಂಘದ ಸಂಚಾಲಕನಾಗಿದ್ದ ನರಸಿಂಹಮೂರ್ತಿ(ಕುರಿ ಮೂರ್ತಿ) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಟೀ ಅಂಗಡಿ ಮುಂದೆ ಕುಳಿತಿದ್ದ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಬುಧವಾರ ಮಧ್ಯಾಹ್ನ 1 ಗಂಟೆ ವೇಳೆ ಅಂಗಡಿ ಬಳಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಕುರಿ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.
ಘಟನೆ ಸಂಬಂಧ ಗುಬ್ಬಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕುಮಾರಸ್ವಾಮಿ ಎಲ್ ಕೆಜಿ ಮಗುನಾ? ತಿಥಿ ಕಾರ್ಡ್ ಬಳಕೆ ಗೆ ಸಿಎಂ ಇಬ್ರಾಹಿಂ ಕಿಡಿ
ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ ಪ್ರಮಾಣವಚನ ಸ್ವೀಕಾರ
ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಹಂಸಲೇಖ ಮಹತ್ವದ ಹೇಳಿಕೆ!
ಯೋಗ ದಿನ: ಮೈಸೂರು ಮಹಾರಾಜರಿಗೆ ಆಹ್ವಾನ ಯಾಕಿಲ್ಲ? | ಪ್ರತಾಪ್ ಸಿಂಹ ಹೇಳಿದ್ದೇನು?