ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ DSS ಪ್ರತಿಭಟನೆ
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಸ್ವಾಭಿಮಾನಿ ಪ್ರೊಫೆಸರ್ ಬಿ. ಕೃಷ್ಣಪ್ಪ , ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜುಲೈ 29 ರಂದು ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಆಡಳಿತದ ಕರ್ನಾಟಕ ಸರಕಾರ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ’ದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಕಡಿತಗೊಳಿಸಿದ್ದನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶ್ರೇಯಾಭಿವೃದ್ದಿಗೆ ಸಾಂವಿಧಾನಿಕವಾಗಿ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಭರವಸೆ ನೀಡಿದ ಗ್ಯಾರಂಟಿ ಯೋಜನೆಗೆ ಉಪಯೋಗಿಸುವ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಈ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ರಘು ಕೆ. ಎಕ್ಕಾರು, ರಾಜ್ಯ ಸಂಘಟನಾ ಸಂಚಾಲಕರಾದ ಎಮ್.ದೇವ್ ದಾಸ್, ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣಾನಂದ ಡಿ. , ಕಮಲಾಕ್ಷ ಬಜಾಲ್ , ಬಾಲು ಕುಂದರ್, ರಾಮ್ ದಾಸ್ ಮೆರೆಮಜಲು, ರಾಜಯ್ಯ ಮಂಗಳೂರು, ತಾಲೂಕು ಸಂಚಾಲಕರಾದ ರಾಘವೇಂದ್ರ ಎಸ್. , ಸಂಘಟನಾ ಸಂಚಾಲಕರಾದ ರುಕ್ಕಯ್ಯ ಕರಂಬಾರು, ಕೃಷ್ಣ ಎಕ್ಕಾರು, ದೊಂಬಯ್ಯ ಕಟೀಲು, ಸುರೇಶ್ ಬೆಳ್ಳಯಾರು ಗೀತ ಕರಂಬಾರು ಉಪಸ್ಥಿತರಿದ್ದರು. ಸಂಕಪ್ಪ ಕಾಂಚನ್, ಕಮಲಾಕ್ಷ ಬಜಾಲ್ , ಗಂಗಾಧರ್ ಪಡ್ಪು ಮತ್ತು ಸಂಗಡಿಗರು ಹೋರಾಟದ ಹಾಡುಗಳನ್ನು ಹಾಡಿದರು. ಸದಾಶಿವ ಪಡುಬಿದ್ರಿ ನಿರೂಪಣೆ ಮಾಡಿದರು. ನಾಗೇಶ್ ಚಿಲಿಂಬಿ ವಂದಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: