ದಕ್ಷಿಣ ಕನ್ನಡ: ಭಾರೀ ಮಳೆ ಹಿನ್ನೆಲೆ ಆಗಸ್ಟ್ 1 ಶಾಲೆ, ಪಿಯು ಕಾಲೇಜುಗಳಿಗೆ ರಜೆ - Mahanayaka
6:04 PM Wednesday 30 - October 2024

ದಕ್ಷಿಣ ಕನ್ನಡ: ಭಾರೀ ಮಳೆ ಹಿನ್ನೆಲೆ ಆಗಸ್ಟ್ 1 ಶಾಲೆ, ಪಿಯು ಕಾಲೇಜುಗಳಿಗೆ ರಜೆ

Mullai Mugilan
31/07/2024

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆಗಸ್ಟ್ 1 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಡಳಿತ ನೀಡಿದ ಸೂಚನೆಗಳನ್ನು ಪಾಲಿಸಿ:
ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತ ವಹಿಸಿ.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಿ.
ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿ ಇದಕ್ಕೆ ಸಂಬಂಧಿಸಿದ ವಿವರ ಇಲ್ಲಿ ನೀಡಲಾಗಿದೆ.

ತುರ್ತು ಸೇವೆಗೆ 24*7 ಕಂಟ್ರೋಲ್ ರೂಂ: 1077/2442590
ಮಂಗಳೂರು ತಾಲೂಕು: 0824–2220587
ಉಳ್ಳಾಲ ತಾಲೂಕು: 0824–2204424
ಬಂಟ್ವಾಳ ತಾಲೂಕು – 08255-232500
ಪುತ್ತೂರು ತಾಲೂಕು – 02851-230349
ಬೆಳ್ತಂಗಡಿ ತಾಲೂಕು – 08256-232047
ಸುಳ್ಯ ತಾಲೂಕು – 08257- 231231
ಮೂಡಬಿದ್ರೆ ತಾಲೂಕು – 08258 – 238100
ಮುಲ್ಕಿ ತಾಲೂಕು – 0824 — 2294496


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ