ದುಪ್ಪಟ್ಟು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಮಾರಾಟ | ವ್ಯವಸ್ಥಾಪಕನ ಬಂಧನ

oxygen cylinder
08/05/2021

ಬೆಂಗಳೂರು: ಸರ್ಕಾರ ನಿಗದಿ ಪಡಿಸಿದ ದರಕ್ಕಿಂತಲೂ ದುಪ್ಪಟ್ಟು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ‘ಸಿಗಾ ಗ್ಯಾಸಸ್’ ವ್ಯವಸ್ಥಾಪಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

36 ವರ್ಷ ವಯಸ್ಸಿನ  ರವಿ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ‘ಸಿಗಾ ಗ್ಯಾಸಸ್’ನ ವ್ಯವಸ್ಥಾಪಕನಾಗಿದ್ದು, ದುಬಾರಿ ಬೆಲೆಗೆ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

’47 ಲೀಟರ್ ಸಿಲಿಂಡರ್‌ಗೆ ರೂ.3,000 ನಿಗದಿಪಡಿಸಲಾಗಿದೆ. ಆದರೆ, ಅದೇ ಸಿಲಿಂಡರ್‌ನ್ನು ರೂ 6,000 ಮಾರಾಟ ಮಾಡಲಾಗುತ್ತಿತ್ತು ಎಂದು ಸಾರ್ವನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version