ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ: ಮಹಿಳೆಯ ದಾರುಣ ಸಾವು
ಪೆರ್ನೆ: ದ್ವಿಚಕ್ರವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪೆರ್ನೆ ಎಂಬಲ್ಲಿ ನಡೆದಿದೆ.
ಮೃತರು ಪುತ್ತೂರಿನ ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ನ ಮಾಲಕರ ಪತ್ನಿ ಪೂರ್ಣಿಮಾ ಎ. ಎನ್ (47ವರ್ಷ ) ಎಂದು ತಿಳಿದುಬಂದಿದೆ
ಬಾಲಕೃಷ್ಣ ದಂಪತಿ ಜೂ.18 ರಂದು ಬೆಳಿಗ್ಗೆ ಪೆರ್ನೆಯಲ್ಲಿರುವ ತಮ್ಮ ತೋಟಕ್ಕೆ ಹೋಗಿದ್ದರು. ಅಲ್ಲಿಂದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಟಿಪ್ಪರ್ ವೊಂದು ಬಾಲಕೃಷ್ಣ ದಂಪತಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಬಾಲಕೃಷ್ಣ ಭಟ್ ಅವರ ಪತ್ನಿ ಪೂರ್ಣಿಮ ಮೃತಪಟ್ಟಿದ್ದಾರೆ.
ಟಿಪ್ಪರ್ ಚಾಲಕ ಜಾರ್ಕಂಡ್ ನಿವಾಸಿ ಸುನಿಲ್ ಕುಮಾರ್ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ ಕೇಸು ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜೀವನ ಸಾಗಿಸಲು ಬೀದಿ ಬದಿ ಸಾಬೂನು ಮಾರಾಟ ಮಾಡುತ್ತಿರುವ ಖ್ಯಾತ ನಟಿ
ಹೇಳಿಕೆಗೆ ಸ್ಪಷ್ಟನೆ ನೀಡುತ್ತ, ಗುಂಪು ಹತ್ಯೆ ಸಮರ್ಥಕರಿಗೆ ತಿರುಗೇಟು ನೀಡಿದ ಸಾಯಿ ಪಲ್ಲವಿ
ನಾಗರಿಕ ವಿಚಾರಣೆ ವೇದಿಕೆ ಮತ್ತು ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆ: ಪದಾಧಿಕಾರಿಗಳ ನೇಮಕ
ಗುರುದ್ವಾರದಲ್ಲಿ ಸ್ಫೋಟ: ಇಬ್ಬರು ಸಾವು, ಹಲವರನ್ನು ಒತ್ತೆಯಾಳಾಗಿಸಿದ ಉಗ್ರರು