ಈ ನಟನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಘೋಷಿಸಿದ ದೆಹಲಿ ಪೊಲೀಸ್ - Mahanayaka
9:47 PM Thursday 19 - September 2024

ಈ ನಟನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಘೋಷಿಸಿದ ದೆಹಲಿ ಪೊಲೀಸ್

03/02/2021

ನವದೆಹಲಿ: ದೆಹಲಿ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಪಂಜಾಬ್ ನಟ ಸಿಧುನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನವನ್ನು ದೆಹಲಿ ಪೊಲೀಸರು ಪ್ರಕಟಿಸಿದ್ದಾರೆ.

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಕೆಂಪು ಕೋಟೆಯ ಧ್ವಜಸ್ಥಂಭ ಹಾಗೂ ಕೆಂಪುಕೋಟೆಯ ಗೋಡೆಯ ಮೇಲೆ ರೈತರ ಬಾವುಟ ಹಾರಿಸಲಾಗಿತ್ತು. ಈ ಪ್ರಕರಣದಲ್ಲಿ ಸಿಧು ಪ್ರಮುಖ ಆರೋಪಿಯಾಗಿದ್ದಾನೆ.

ದೀಪ್ ಸಿಧು ಮತ್ತು ಇತರ  ಆರೋಪಿಗಳನ್ನು ಬಂಧಿಸಲು ಸಹಾಯ ಮಾಡುವವರಿಗೆ 1 ಲಕ್ಷ ರೂ.ಗಳ ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ