ಕೈಕೊಟ್ಟ ಕೇಂದ್ರ ಸರ್ಕಾರ: ಈ ಪ್ರಮುಖ 10 ಯೋಜನೆಗಳಿಗೆ ಬಿಡಿಗಾಸೂ ಬಿಡುಗಡೆಯಾಗಿಲ್ಲ!
ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಮುಖ 10 ಯೋಜನೆಗಳಿಗೆ ಕೇಂದ್ರ ಸರ್ಕಾರ ಈ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಒಂದು ಪೈಸೆ ಕೂಡ ನೀಡಿಲ್ಲ. ರಾಜ್ಯ ಸರ್ಕಾರ ಕೂಡ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಬಹುತೇಕ ಯೋಜನೆಗಳ ಅನುಷ್ಠಾನ ಕುಂಠಿತಗೊಂಡಿದೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡಿಸಿದ ಅಂಕಿ ಅಂಶಗಳಿಂದ ಈ ಮಾಹಿತಿಗಳು ಬಹಿರಂಗವಾಗಿದೆ ಎಂದು ಹೇಳಲಾಗಿದೆ.
ಗ್ರಾಮ ಸಡಕ್, ಸ್ವಚ್ಛ ಭಾರತ, ಪ್ರಧಾನ ಮಂತ್ರಿ ಆವಾಜ್, ಕೃಷಿ ಯಾಂತ್ರಿಕತೆಯ ಮೇಲಿನ ಉಪ ಅಭಿಯಾನ, ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆ, ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಸಂವಿಧಾನದ 275(1)ನೇ ವಿಧಿಯಡಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆ ಮತ್ತು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಅನುದಾನವೇ ಬಿಡುಗಡೆಯಾಗಿಲ್ಲ ಎಂದು ತಿಳಿದು ಬಂದಿದೆ.
ಹತ್ತು ಯೋಜನೆಗಳ ಪೈಕಿ ಏಳು ಯೋಜನೆಗಳು ಒಂದು ಹೆಜ್ಜೆ ಕೂಡ ಮುಂದಿಟ್ಟಿಲ್ಲ. ಆದರೆ, ಪಂಚಾಯತ್ ರಾಜ್ ಇಲಾಖೆ ಮತ್ತು ವಸತಿ ಇಲಾಖೆಗಳು ಹಿಂದಿನ ವರ್ಷದ ಅನುದಾನವನ್ನೇ ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿ ಆರಂಭಿಸಿವೆ.
ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ವಿಳಂಬವಾದರೂ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವ ಮೂಲಕ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ, ಕೋವಿಡ್, ಜಿಎಸ್ ಟಿ ಪಾಲು ಹಂಚಿಕೆ ಮತ್ತು ಪರಿಹಾರದ ಮೊತ್ತದಲ್ಲಿ ಕಡಿತವಾಗಿರುವುದರಿಂದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಮುಂಗಡವಾಗಿ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡದಂತೆ ಆರ್ಥಿಕ ಇಲಾಖೆ ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.
ಇನ್ನಷ್ಟು ಸುದ್ದಿಗಳು…
ಎಣ್ಣೆ ಪಾರ್ಟಿಯ ಬಳಿಕ ಡಬ್ಬಲ್ ಮರ್ಡರ್ | ಸ್ನೇಹಿತರಿಂದಲೇ ನಡೆಯಿತು ದುಷ್ಕೃತ್ಯ!
ನೀರಿನ ಬಾಟಲಿಯೇ ಬೆಂಗಳೂರಿನ ಅಪಘಾತಕ್ಕೆ ಕಾರಣವಾಯ್ತೆ? | ಅಪಘಾತದ ವೇಳೆ ನಡೆದದ್ದೇನು?
ಶಾಶ್ವತ ಸೂರಿಗಾಗಿ ರಸ್ತೆಯಲ್ಲಿ 6 ಕಿ.ಮೀ. ಉದ್ದಂಡ ನಮಸ್ಕಾರ ಹಾಕಿ ದಲಿತ ಮಹಿಳೆಯರು!
ಮಹಿಳೆಯ ನಗ್ನ ಚಿತ್ರ ಇಟ್ಟುಕೊಂಡು ಬ್ಲ್ಯಾಕ್ ಮೇಲ್ | ಆರೋಪಿ ಅರೆಸ್ಟ್
ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ