ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಾಯಿ! - Mahanayaka
3:16 PM Thursday 12 - December 2024

ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಾಯಿ!

mysore
28/06/2022

ಮೈಸೂರು: ಎರಡು ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಟಿ.ನರಸೀಪುರ ತಾಲ್ಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.

32 ವರ್ಷ ವಯಸ್ಸಿನ ತಾಯಿ ಸರೋಜ ಎಂಬವರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಮಹಿಳೆಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬಾತನ ಜೊತೆ ಸರೋಜ ವಿವಾಹವಾಗಿದ್ದರು. ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಸರೋಜ ಆಗಮಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್: ವಿದ್ಯುತ್ ಬೆಲೆ ಏರಿಕೆ!

21 ವರ್ಷ ಜೊತೆಗಿದ್ದ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಪಿ!

ಶಾಲೆಗಳಿಗೆ ರಜೆ, ಪೆಟ್ರೋಲ್ ಗಾಗಿ ಕಾದು ಕುಳಿತ ಜನರು: ಶ್ರೀಲಂಕಾದ ದುಸ್ಥಿತಿ!

ನಟಿಯ ಮೇಲೆ ಅತ್ಯಾಚಾರ ಆರೋಪ: ನಟ ವಿಜಯ್ ಬಾಬು ಆರೆಸ್ಟ್

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಆಲಿಯಾ ಭಟ್!

 

ಇತ್ತೀಚಿನ ಸುದ್ದಿ