ಇಬ್ಬರು ವ್ಯಾಪಾರಿಗಳ ಕೊಲೆ ಯತ್ನ: 6 ಆರೋಪಿಗಳ ಬಂಧನ, ಹಲ್ಲೆಗೊಳಗಾದವರ ವಿರುದ್ಧವೂ ಪ್ರಕರಣ

crime news
23/10/2022

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು‌ ಮಂಗಳೂರಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ.

ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿಶೋರ್, ಭವಿತ್, ರಂಜಿತ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 144, 341, 504, 323, 324, 427, 149ರಡಿ  ಪ್ರಕರಣ ದಾಖಲಾಗಿದೆ.‌

ಇನ್ನು ಹಲ್ಲೆಗೊಳಗಾದ ರಮೀಝುದ್ದೀನ್ ಮತ್ತು ರಫೀಕ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಈ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿದ್ದು, ಪೊಲೀಸ್ ನಿಗಾದಲ್ಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version