ದಿಲ್ಲಿ ಎಲೆಕ್ಷನ್ ರಿಸಲ್ಟ್: ಕೇಜ್ರಿವಾಲ್ ಗೆ ಹೀನಾಯ ಸೋಲು; ಬಿಜೆಪಿ ಗೆಲುವಿನ ನಗೆ

ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ರಿಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲಾಗಿದ್ದು, ಅವರಿಗೆ ಭಾರೀ ಮುಖಭಂಗವಾಗಿದೆ.
ಕಲ್ಕಾಜಿ ಕ್ಷೇತ್ರದಿಂದ ದೆಹಲಿ ಸಿಎಂ ಅತಿಶಿ ಗೆಲವು ಪಡೆದುಕೊಂಡಿದ್ದಾರೆ. ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಕಲ್ಕಾಜಿ ಕ್ಷೇತ್ರವು ಯಾರ ಪಾಲಾಗಲಿದೆ ಎಂಬುದು ಕೊನೆ ವರೆಗಿನ ಕುತೂಹಲವಾಗಿತ್ತು. ಮತ ಎಣಿಕೆಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ತೀವ್ರ ಪೈಪೋಟಿ ಇತ್ತು. ಆರಂಭದಲ್ಲಿ ದೆಹಲಿ ಸಿಎಂ ಅತಿಶಿ ಹಿನ್ನಡೆ ಅನುಭವಿಸಿದ್ದರು.
2020ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಅತಿಶಿ ಗೆದ್ದಿದ್ದರು. ಈ ಬಾರಿ ಬಿಜೆಪಿಯ ರಮೇಶ್ ಬಿಧುರಿ ಹಾಗೂ ಕಾಂಗ್ರೆಸ್‌ನ ಅಲ್ಕಾ ಲಂಬಾ ವಿರುದ್ಧ ಕಣಕ್ಕಿಳಿದಿದ್ದರು.
ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ ಈ ಬಾರಿಯೂ ಗೆಲ್ಲುವ ವಿಶ್ವಾಸ ಹೊಂದಿದ್ದರು. ಹ್ಯಾಟ್ರಿಕ್ ಗೆಲುವು ಸಾಧಿಸುವ ಎಎಪಿ ಕನಸು ಭಗ್ನವಾಗಿದೆ.
ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ವರ್ಮಾ 3182 ಮತಗಳಿಂದ ಮುನ್ನಡೆ ಸಾಧಿಸುವ ಮೂಲಕ ಕೇಜ್ರಿವಾಲ್ ಸೋತಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಸೋತ ಬಳಿಕ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಅವರು, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಮ್ಮ ಪಕ್ಷವು ಜನರ ಸೇವೆಯಲ್ಲಿ ಮುಂದುವರಿಯಲಿದ್ದು, ವಿರೋಧ ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದೇವೆ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj