ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂಗೆ ಮತ್ತೆ ಸಂಕಷ್ಟ - Mahanayaka

ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂಗೆ ಮತ್ತೆ ಸಂಕಷ್ಟ

31/07/2023

ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಕೆಲವು ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಆಸ್ತಿಗಳನ್ನು ವಶಕ್ಕೆ ತಗೆದುಕೊಳ್ಳಲು ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ ಎಂದು ಅವರು ಹೇಳಿದರು. ಆಸ್ತಿಗಳ ಸಂಖ್ಯೆ ಮತ್ತು ಅವುಗಳ ನಿಖರವಾದ ಮೌಲ್ಯ ಎಷ್ಟು ಎಂಬುದು ಸದ್ಯ ತಿಳಿದುಬಂದಿಲ್ಲ.

ಕಳೆದ ಕೆಲವು ತಿಂಗಳುಗಳಿಂದ ಪ್ರಸಾದ್ ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಪುತ್ರಿಯರಾದ ಮಿಸಾ ಭಾರತಿ (ರಾಜ್ಯಸಭೆಯಲ್ಲಿ ಆರ್‌ಜೆಡಿ ಸಂಸದೆ), ಚಂದಾ ಯಾದವ್ ಮತ್ತು ರಾಗಿಣಿ ಯಾದವ್ ಸೇರಿದಂತೆ ಅವರ ಮಕ್ಕಳ ಹೇಳಿಕೆಯನ್ನು ಇಡಿ ದಾಖಲಿಸಿಕೊಂಡಿದೆ.

ಯುಪಿಎ-1 ಸರ್ಕಾರದಲ್ಲಿ ಲಾಲು ಪ್ರಸಾದ್ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿತ್ತು.

2004-09ರ ಅವಧಿಯಲ್ಲಿ ಭಾರತೀಯ ರೈಲ್ವೇಯ ವಿವಿಧ ವಲಯಗಳಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ವಿವಿಧ ವ್ಯಕ್ತಿಗಳನ್ನು ನೇಮಿಸಲಾಗಿತ್ತು. ಇದಕ್ಕಾಗಿ ಗಿ ಸಂಬಂಧಪಟ್ಟ ವ್ಯಕ್ತಿಗಳು ತಮ್ಮ ಜಮೀನನ್ನು ಲಾಲು ಪ್ರಸಾದ್ ಅವರ ಕುಟುಂಬದ ಸದಸ್ಯರಿಗೆ ವರ್ಗಾಯಿಸಿದ್ದಾರೆ ಎಂದು ಇಡಿ ಮತ್ತು ಸಿಬಿಐ ಆರೋಪಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ