ಇಡಿ ದಾಳಿ: ಕುಮಾರಸ್ವಾಮಿ ವಿರುದ್ಧ ಅನುಮಾನ ವ್ಯಕ್ತಪಡಿಸಿದ ಜಮೀರ್!
ಬೆಂಗಳೂರು: ತಾನು ಹಿಂದೆ ಇದ್ದ ಪಕ್ಷದವರೇ ನನ್ನ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದಾರೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
ನನ್ನ ಬೆಳವಣಿಗೆಯನ್ನು ಸಹಿಸದೇ ಈ ದಾಳಿ ನಡೆಸಿದ್ದಾರೆ. ಆದರೆ ಅವರು ಯಾರು ಎಂದು ನಾನು ಹೇಳುವುದಿಲ್ಲ. ನಾನು ಈ ಮಟ್ಟಕ್ಕೆ ಬೆಳೆಯುತ್ತೇನೆ ಎಂದು ಅವರು ನಿರೀಕ್ಷಿಸಿರಲಿಲ್ಲ. ದುರುದ್ದೇಶದಿಂದ ನನ್ನ ಮನೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಜಮೀರ್ ಆರೋಪಿಸಿದ್ದಾರೆ.
ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆಯೇ ನನಗೂ ಅಚ್ಚರಿ ಉಂಟಾಯಿತು. ಅವರೊಬ್ಬರೇ ಬೆಳೆಯಬೇಕು, ಅವರೊಬ್ಬರೇ ಮನೆ ಕಟ್ಟಬೇಕು, ನನ್ನನ್ನು ವೀಕ್ ಮಾಡಬೇಕು ಎನ್ನುವ ಕಾರಣಕ್ಕಾಗಿ ದಾಳಿ ನಡೆಸಲಾಗಿದೆ. ಆದರೆ ಎಲ್ಲವನ್ನು ಎದುರಿಸುವ ಶಕ್ತಿ ನನಗಿದೆ ಎಂದು ಜಮೀರ್ ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡುತ್ತಾ ಹೇಳಿದ್ದಾರೆ ಎಂದು ವರದಿಯಾಗಿದೆ.
ಇನ್ನಷ್ಟು ಸುದ್ದಿಗಳು…
ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ | ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
ವಾಟ್ಸಾಪ್ ಮೂಲಕ ಕೊವಿಡ್ ಲಸಿಕೆ ಪ್ರಮಾಣ ಪತ್ರ ಪಡೆಯುವುದು ಹೇಗೆ?
ಸಚಿವರಾದರೂ ಜೀಪ್ ನಿಂದ ಇಳಿದು ಸಾಮಾನ್ಯರಂತೆ ನಡೆದ ಸಚಿವ ಅಂಗಾರ! | ಇದು ಸರಳತೆ ಅಲ್ಲ, ವೈಫಲ್ಯ!
ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಮನೆಗೆ ಕರೆಸಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್
403 ಕ್ಷೇತ್ರಗಳಲ್ಲಿಯೂ ASP ಸ್ಪರ್ಧೆ | ಮಾಯಾವತಿಗೆ ಅಸುರಕ್ಷಿತ ಭಾವನೆ ಇದೆ- ಚಂದ್ರಶೇಖರ್ ಆಜಾದ್