ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಡಿ ಅನುಮತಿ
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಅನುಮೋದನೆ ನೀಡಿದೆ.
ಇನ್ನು ಈ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿಯನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅನುಮತಿ ನೀಡಿದ ನಂತರ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.
ಕಳೆದ ನವೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಲ್ಲಿ, ಸಾರ್ವಜನಿಕ ಸೇವಕರನ್ನು ವಿಚಾರಣೆಗೆ ಒಳಪಡಿಸುವ ಮೊದಲು ಇಡಿ ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿತ್ತು.
ಮುಂದಿನ ತಿಂಗಳು ತನಿಖಾ ಸಂಸ್ಥೆ ವಿ.ಕೆ.ಸಕ್ಸೇನಾ ಅವರಿಗೆ ಪತ್ರ ಬರೆದು ಕೇಜ್ರಿವಾಲ್ ಹಗರಣದ “ಕಿಂಗ್ ಪಿನ್ ಮತ್ತು ಪ್ರಮುಖ ಸಂಚುಕೋರ” ಆಗಿರುವುದರಿಂದ ಅನುಮತಿ ನೀಡಬೇಕು ಎಂದು ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj