ಇಡಿ ಕಚೇರಿಗೆ ರಾಹುಲ್ ಗಾಂಧಿ ಅಧಿಕಾರಿಗಳಿಂದ ಹಾಜರು - Mahanayaka

ಇಡಿ ಕಚೇರಿಗೆ ರಾಹುಲ್ ಗಾಂಧಿ ಅಧಿಕಾರಿಗಳಿಂದ ಹಾಜರು

ed
13/06/2022

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ವಿಚಾರಣೆಗಾಗಿ ಇಡಿ ಕಚೇರಿಗೆ ಹಾಜರಾಗಿದ್ದಾರೆ.

ಈ ಹಿನ್ನೆಲೆ ಪಕ್ಷದ ಕಾರ್ಯಕರ್ತರು ಅವರನ್ನು ಬೆಂಬಲಿಸಿ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದ್ದಾರೆ. ಈಗಾಗಲೇ ಕಾರ್ಯಕರ್ತರು ಎಐಸಿಸಿ ಕಚೇರಿ ಮತ್ತು ರಾಹುಲ್ ಗಾಂಧಿ ನಿವಾಸದ ಮುಂದೆ ಜಮಾವಣೆಯಾಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಕ್ರಮವನ್ನು ಪ್ರತಿಭಟಿಸಿ ಇಂದು ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ಮಾಡಿ ಪ್ರತಿಭಟಿಸಿದರು.

ಈ ವೇಳೆ ಕಾರ್ಯಕರ್ತರು ತಮ್ಮ ನಾಯಕರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜಿಮ್ ನಲ್ಲಿ ವರ್ಕೌಟ್ ವೇಳೆ ಕುಸಿದು ಬಿದ್ದು ಯುವಕ ಸಾವು!

ಲೈಂಗಿಕ ದೌರ್ಜನ್ಯ ವಿರೋಧಿಸಿದ ಮಹಿಳೆ ಪೇಪರ್ ಕಟರ್ ನಿಂದ ಹಲ್ಲೆ:  ಮಹಿಳೆ ಮುಖಕ್ಕೆ 118 ಹೊಲಿಗೆ!

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು?: ದೂರು ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಇತ್ತೀಚಿನ ಸುದ್ದಿ