ಇಡಿ ಭರ್ಜರಿ ಬೇಟೆ: ಪಿಎಫ್ ಐ ನಾಯಕರ ಮನೆ, ಕಚೇರಿಗಳ ಮೇಲೆ ದಾಳಿ - Mahanayaka
6:04 PM Wednesday 30 - October 2024

ಇಡಿ ಭರ್ಜರಿ ಬೇಟೆ: ಪಿಎಫ್ ಐ ನಾಯಕರ ಮನೆ, ಕಚೇರಿಗಳ ಮೇಲೆ ದಾಳಿ

03/12/2020

ತಿರುವನಂತಪುರ:  ಪಿಎಫ್ ಐ ನಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು,  ಪೆನ್ ಡ್ರೈವ್, ಲ್ಯಾಪ್ ಟಾಪ್ ಗಳು ಸೇರಿದಂತೆ ವಿವಿಧ ದಾಖಲೆಗಳನ್ನು  ವಶಪಡಿಸಿಕೊಂಡಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ ಐ) ರಾಷ್ಟ್ರೀಯ ಅಧ್ಯಕ್ಷ  ಒಎಂಎ ಸಲಾಮ್, ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್, ಅನೀಸ್ ಅಹ್ಮದ್ ಇವರ  ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆದಿದೆ.  ಕರ್ನಾಟಕ, ಬಿಹಾರ, ತಮಿಳುನಾಡು, ಕೇರಳದಲ್ಲಿ ಪಿಎಫ್ ಐ ನಾಯಕರ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ದಾಳಿಯ ವೇಳೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು, ಅಧಿಕಾರಿಗಳ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ ವಿವಿಧ ನಾಯಕರ ಆರ್ಥಿಕ ಚಟುವಟಿಕೆಗಳ ಮೇಲೆ ಇಡಿ ಕಣ್ಣಿರಿಸಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ