ಇದು ಧರ್ಮ-ಅಧರ್ಮದ ಯುದ್ಧ | ಈ ಚುನಾವಣೆ ಒಬ್ಬ ವ್ಯಕ್ತಿಯ ಸ್ವಾರ್ಥಕ್ಕಾಗಿ ನಡೆಯುತ್ತಿದೆ | ಡಿ.ಕೆ.ಶಿವಕುಮಾರ್ ವಾಗ್ದಾಳಿ - Mahanayaka
8:20 AM Thursday 12 - December 2024

ಇದು ಧರ್ಮ-ಅಧರ್ಮದ ಯುದ್ಧ | ಈ ಚುನಾವಣೆ ಒಬ್ಬ ವ್ಯಕ್ತಿಯ ಸ್ವಾರ್ಥಕ್ಕಾಗಿ ನಡೆಯುತ್ತಿದೆ | ಡಿ.ಕೆ.ಶಿವಕುಮಾರ್ ವಾಗ್ದಾಳಿ

30/10/2020

ಬೆಂಗಳೂರು:  ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಕೇವಲ ಚುನಾವಣೆಯಲ್ಲ ಇದೊಂದು ಧರ್ಮ ಯುದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ,ಕೆ,ಶಿವಕುಮಾರ್ ಹೇಳಿದ್ದು,  ಈ ಕ್ಷೇತ್ರವನ್ನು ನೀಚ ರಾಜಕಾರಣಿಯಿಂದ ಮುಕ್ತಗೊಳಿಸಬೇಕು ಎಂದು ಹೇಳಿದರು.


 ಕ್ಷೇತ್ರದ ಜಾಲಹಳ್ಳಿ ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಬೃಹತ್ ರೋಡ್ ಶೋ ನಡೆಸಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಲು ಜನರ ಕಷ್ಟಕ್ಕೆ ಧ್ವನಿಯಾಗಲು ಕಾಂಗ್ರೆಸ್ ಪಕ್ಷ ಯುವ, ವಿದ್ಯಾವಂತ ಹಾಗೂ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಹೇಳಿದರು.


ಈ ಚುನಾವಣೆ ರಾಜಕಾರಣದ ಧರ್ಮ ಹಾಗೂ ಅಧರ್ಮದ ನಡುವಣ ಯುದ್ಧ. ಒಂದು ಪಕ್ಷದಲ್ಲಿ ಗೆದ್ದು, ಆ ಪಕ್ಷ ಹಾಗೂ ಮತದಾರರನ್ನು ಕೇಳದೇ ಅವರು ಕೊಟ್ಟ ಮತ ಹಾಗೂ ಸ್ಥಾನವನ್ನು ಮಾರಿಕೊಂಡಿರುವುದು ರಾಜಕಾರಣದ ಅಧರ್ಮ. ಒಂದು ವ್ಯಕ್ತಿಯ ಸ್ವಾರ್ಥಕ್ಕಾಗಿ ಇಂದು ಈ ಚುನಾವಣೆಯ ನಡೆಯುತ್ತಿದೆ  ಎಂದು ಹೇಳಿದರು.


ಇತ್ತೀಚಿನ ಸುದ್ದಿ