ಯತ್ನಾಳ್ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಚಿತ್ತಾಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪಿಯೂಷ್ ಗೋಯಲ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ಜಾರಿಯಾಗಿದೆ. ಕಾಂಗ್ರೆಸ್ ನಾಯಕರು ದೂರು ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗ ದಲ್ಲಿ ಮಾಡಿದ ಭಾಷಣದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಮೇ 4 ರೊಳಗೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ‘ನಾಲಾಯಕ್’ ಎಂದು ಕರೆದಿದ್ದರು. ಯತ್ನಾಳ್ ಅವರು ಮೋದಿ ವಿಶ್ವ ನಾಯಕ. ಅಂಥ ನಾಯಕನನ್ನು ನಾಗರಹಾವಿಗೆ ಹೋಲಿಸುವುದು ಸರಿಯೇ? ಕಾಂಗ್ರೆಸ್ ನಾಯಕರು ಸೋನಿಯಾ ಮಾತಿಗೆ ಮಣಿದು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ವಿಷಕನ್ಯೆಯೇ ಎಂದು ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಅವರನ್ನು ʼಅರೆಹುಚ್ಚʼ ಎಂದು ಕರೆದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw