ಇಂದು ಈದ್–ಉಲ್—ಫಿತ್ರ್: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ

ಬೆಂಗಳೂರು/ಭೋಪಾಲ್: ದೇಶಾದ್ಯಂತ ಮುಸ್ಲಿಮರು ಇಂದು ಪವಿತ್ರ ರಂಝಾನ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಹಬ್ಬದ ಸಂಭ್ರಮದ ನಡುವೆಯೇ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದಾರೆ.
ಈದ್–ಉಲ್–ಫಿತ್ರ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಲಾಗುತ್ತಿದೆ.
ಬೆಂಗಳೂರು, ಭೋಪಾಲ್ ಸೇರಿದಂತೆ ದೇಶದ ವಿವಿಧೆಡೆ ಮಸೂದೆ ವಿರೋಧಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ ಮಾಡುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ ಮಾಡಿತ್ತು.
ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರಿನಲ್ಲಿಯೂ ಸಹ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4