ಭದ್ರತಾ ಪಡೆಗಳಿಂದ ಎನ್ ಕೌಂಟರ್: 8 ನಕ್ಸಲರ ಹತ್ಯೆ

ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್ ನಲ್ಲಿ ಎಂಟು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಲೂರು ಪೊಲೀಸ್ ಠಾಣೆಯ ಬಳಿಯ ಕಾಡಿನಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಲೂರು ಪಿಎಸ್ ವ್ಯಾಪ್ತಿಯ ಕಾಡಿನಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ 8 ನಕ್ಸಲರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ), ವಿಶೇಷ ಕಾರ್ಯಪಡೆ (ಎಸ್ಟಿಎಫ್), ಕೋಬ್ರಾ 202 ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) 222 ಬೆಟಾಲಿಯನ್ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj