ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು
ಚಿಕ್ಕಬಳ್ಳಾಪುರ: ಈಜಲು ನೀರಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಬಾಗಲೂರು ಬಳಿಯ ರಜಾಕ್ ಪಾಳ್ಯದ ವಿದ್ಯಾರ್ಥಿಗಳಾದ ಜುನೈದ್ ಹಾಗೂ ಹೊಸಕೋಟೆ ತಾಲೂಕು ವಳಗೆರೆಪುರದ ವಿದ್ಯಾರ್ಥಿ ಸಂತೋಷ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರಿಬ್ಬರೂ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದರು.
ವಸತಿ ಶಾಲೆಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಪ್ರವಾಸಕ್ಕೆ ತೆರಳದ ವಿದ್ಯಾರ್ಥಿಗಳ ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶಾಲೆಯ ಪ್ರಭಾರ ಜವಾಬ್ದಾರಿ ವಹಿಸಿಕೊಂಡಿದ್ದ ಕಂಪ್ಯೂಟರ್ ಶಿಕ್ಷಕಿ ರಶ್ಮಿ, ವೀಣಾ ಹಾಗೂ ಕಾವಲುಗಾರ ಪ್ರಸನ್ನ ಪಿಕ್ನಿಕ್ ವಾಕಿಂಗ್ ಎಂದು ಶಾಲೆಯ ಹಿಂಭಾಗದಲ್ಲಿರುವ ಕುಂಟೆ ಕಡೆಗೆ ಕರೆದುಕೊಂಡಿದ್ದಾರೆ. ಈ ವೇಳೆ 5 ವಿದ್ಯಾರ್ಥಿಗಳು ಈಜಾಡಲು ಕುಂಟೆಗೆ ಧುಮುಕಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಅಲ್ಪಸಂಖ್ಯಾತರ ಇಲಾಖೆ ಜಂಟಿ ನಿರ್ದೇಶಕ ಸಾಬೀರ್ ಮುಲ್ಲಾ, ತಹಶೀಲ್ದಾರ್ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿಕ್ಷಕಿ ರಶ್ಮಿ, ವೀಣಾ, ಕಾವಲುಗಾರ ಪ್ರಸನ್ನ ಹಾಗೂ ಮುಖ್ಯಶಿಕ್ಷಕ ಶಿವಮೂರ್ತಿ ವಿರುದ್ಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka