ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: 9 ಸ್ಥಾನಗಳನ್ನು ಗೆದ್ದುಕೊಂಡ ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಕೂಟ
ಮಹಾರಾಷ್ಟ್ರದ 11 ಕೌನ್ಸಿಲ್ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ) ಮತ್ತು ಎನ್‌ಸಿಪಿ (ಅಜಿತ್ ಪವಾರ್) ಒಳಗೊಂಡ ಆಡಳಿತಾರೂಢ ಮಹಾಯುತಿ ಕೂಟವು ತಾನು ಸ್ಪರ್ಧಿಸಿದ ಎಲ್ಲಾ 9 ಸ್ಥಾನಗಳನ್ನು ಗೆದ್ದುಕೊಂಡಿದೆ.
ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಯಿಂದ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತ ಮಿಲಿಂದ್ ನರ್ವೇಕರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರದ್ನ್ಯಾ ಸತವ್ ದ್ವೈವಾರ್ಷಿಕ ಚುನಾವಣೆಯಲ್ಲಿ ಗೆದ್ದಿದ್ದಾರೆ.
ಬಿಜೆಪಿ ಐದು ಸ್ಥಾನಗಳನ್ನು ಗೆದ್ರೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ತಲಾ ಎರಡು ಸ್ಥಾನಗಳನ್ನು ಗೆದ್ದಿವೆ.
ಮಹಾರಾಷ್ಟ್ರ ವಿಧಾನ ಪರಿಷತ್ (ಎಂಎಲ್ಸಿ) ಚುನಾವಣೆಗೆ ಇಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ದಕ್ಷಿಣ ಮುಂಬೈನ ವಿಧಾನ ಭವನ ಸಂಕೀರ್ಣದಲ್ಲಿ ಮತದಾನ ನಡೆಯಿತು.
ರಾಜ್ಯ ವಿಧಾನಸಭೆಯ ಮೇಲ್ಮನೆಯ 11 ಸ್ಥಾನಗಳಿಗೆ ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದರು.
ಬಿಜೆಪಿಯ ಪಂಕಜಾ ಮುಂಡೆ, ಪರಿಣಯ್ ಫುಕೆ, ಅಮಿತ್ ಗೋರ್ಖೆ, ಯೋಗೇಶ್ ತಿಲೇಕರ್ ಮತ್ತು ಸದಭಾವ್ ಖೋಟ್ ಅವರು ಮಹಾರಾಷ್ಟ್ರ ಎಂಎಲ್ಸಿ ಚುನಾವಣೆಯಲ್ಲಿ ಗೆದ್ದ ಹತ್ತು ಅಭ್ಯರ್ಥಿಗಳಲ್ಲಿ ಸೇರಿದ್ದಾರೆ.
ಮುಂಡೆ, ಫುಕೆ ಮತ್ತು ತಿಲೇಕರ್ ತಲಾ ೨೬ ಮತಗಳನ್ನು ಪಡೆದ ನಂತರ ಗೆಲುವು ಸಾಧಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth