ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಚುನಾವಣಾ ಬಹಿಷ್ಕಾರ, ವಿವಿಧ ಪಕ್ಷಗಳಿಗೆ ರಾಜೀನಾಮೆ ನೀಡಿದ ಸದಸ್ಯರು! - Mahanayaka
3:25 PM Wednesday 5 - February 2025

ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಚುನಾವಣಾ ಬಹಿಷ್ಕಾರ, ವಿವಿಧ ಪಕ್ಷಗಳಿಗೆ ರಾಜೀನಾಮೆ ನೀಡಿದ ಸದಸ್ಯರು!

chunavane bahishkara
20/12/2022

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಾಡುಗಾರ ಗ್ರಾಮದಲ್ಲಿ ಮೊದಲ ಚುನಾವಣಾ ಬಹಿಷ್ಕಾರದ ಬ್ಯಾನರ್ ಪತ್ತೆಯಾಗಿದ್ದು, ಮೂಲಭೂತ ಸೌಲಭ್ಯ ವಂಚಿತ ಜನರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ವಾರದ ಹಿಂದೆ ಗ್ರಾಮಸ್ಥರು ಬಹಿಷ್ಕಾರದ ಎಚ್ಚರಿಕೆ ನೀಡಿದ್ದರು. ಜೊತೆಗೆ ವಿವಿಧ ಪಕ್ಷಗಳ ಮುಖಂಡರು ಕಾರ್ಯಕರ್ತರು ಕೂಡ ರಾಜೀನಾಮೆಯ ಎಚ್ಚರಿಕೆ ನೀಡಿದ್ದರು. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದಾರೆ.

ಹಾಡುಗಾರ ಗ್ರಾಮಕ್ಕೆ ಉತ್ತಮ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು  ಬೇಡಿಕೆ ಇಟ್ಟಿದ್ದರು. ರಸ್ತೆ ನಿರ್ಮಾಣಕ್ಕೆ ಗಡುವು ನೀಡಿದ್ದರೂ ಸಹ, ರಸ್ತೆ ಮಾಡಲು ಮುಂದಾಗದ ಹಿನ್ನೆಲೆಯಲ್ಲಿ ಚುನಾವಣಾ ಬಹಿಷ್ಕಾರಕ್ಕೆ ಜನರು ಮುಂದಾಗಿದ್ದು, ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ , ಬೂತ್ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ