ಮೋದಿ, ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಚುನಾವಣಾ ಆಯೋಗ ವಿಫಲ: ದೇಶಾದ್ಯಂತ ಪ್ರತಿಭಟನೆ

11/05/2024

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿ ದೇಶಾದ್ಯಂತ ಹಲವಾರು ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿವೆ. ಬೆನ್ನುಮೂಳೆ ಗಟ್ಟಿ ಮಾಡಿಕೊಳ್ಳಿ ಅಥವಾ ರಾಜೀನಾಮೆ ಕೊಡಿ ಎನ್ನುವ ಗ್ರೋ ಅ ಸ್ಪೈನ್‌ ಓರ್‌ ರಿಸೈನ್‌ ಎಂಬ ಹ್ಯಾಶ್‌ ಟ್ಯಾಗ್‌ ಅಭಿಯಾನ ಆರಂಭಿಸಿವೆ.

ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಗಳಲ್ಲಿ ಎಗ್ಗಿಲ್ಲದೆ ದ್ವೇಷ ಭಾಷಣ ಮಾಡುತ್ತಿದ್ದಾರೆ. ಮೋದಿ ಹಸೀ ಹಸೀ ಸುಳ್ಳುಗಳ ಮೂಲಕ ಕೋಮು ದ್ವೇಷ ಪ್ರಚೋದಿಸುತ್ತಿದ್ದಾರೆ. ಆದರೂ, ಅವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.

ದೆಹಲಿಯಲ್ಲಿರುವ ಚುನಾವಣಾ ಆಯೋಗದ ಹೊರಗೆ ಹಲವಾರು ಮಂದಿ ಪ್ಲೆಕಾರ್ಡ್‌ಗಳನ್ನು ಹಿಡಿದು, ಪ್ರತಿಭಟನೆ ನಡೆಸಿದ್ದಾರೆ. ಅಹಮದಾಬಾದ್, ಹೈದರಾಬಾದ್, ಮುಂಬೈ, ಬೆಂಗಳೂರು ಮತ್ತು ಮೈಸೂರುಗಳಿಂದ ಹಲವಾರು ಮುಖಂಡರು ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.“ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರ ವಿರುದ್ಧ ಚಾಟಿ ಬೀಸುವ ಆಯೋಗ, ಆಡಳಿತರೂಢ ಬಿಜೆಪಿ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪಕ್ಷಪಾತಿ ಧೋರಣೆಯಿಂದ ವರ್ತಿಸುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version