ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
ನವದೆಹಲಿ: ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ ಹತ್ತುತಿರುವ ಘಟನೆಗಳು ಪದೇ ಪದೇ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಓಲಾ ವಿರುದ್ಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ.
ಪುಣೆಯಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಂಪನಿ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಾರಿಗೆ ಸಚಿವಾಲಯಕ್ಕೆ ಸೂಚಿಸಲಾಗಿದೆ. ಇದರ ಜೊತೆಗೆ ಕಳೆದ ವಾರ ತಮಿಳುನಾಡಿನ ವೆಲ್ಲೂರಿನಲ್ಲಿ ಒಕಿನಾವಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟಗೊಂಡ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ತಮಿಳುನಾಡಿನಲ್ಲಿ ನಡೆದ ಸ್ಕೂಟರ್ ಸ್ಫೋಟಗೊಂಡು ಮನೆಗೆ ಬೆಂಕಿ ಹತ್ತಿಕೊಂಡು ತಂದೆ ಮತ್ತು ಮಗಳು ಸಾವನ್ನಪ್ಪಿದ್ದರು.
ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆಗಳು ಜನರನ್ನು ಇ-ಸ್ಕೂಟರ್ ಗಳಿಂದ ಜನರನ್ನು ದೂರ ಇಡಬಹುದು ಎಂಬುದು ಎಂದು ಆತಂಕ ವ್ಯಕ್ತಪಡಿಸಿದೆ. ತನಿಖೆಯ ಬಗ್ಗೆ ಓಲಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ .
ಕಳೆದ ವಾರ ಪುಣೆಯಲ್ಲಿ Ola S1 Pro ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆಯ ಬಗ್ಗೆ ತಮಗೆ ತಿಳಿದಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಓಲಾ ಪ್ರತಿಕ್ರಿಯಿಸಿದೆ. ಮುಂದಿನ ದಿನಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಓಲಾ ಕಂಪೆನಿ ತಿಳಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗೋಕಾಕ್ ಜನತೆಗೆ ಸಿಹಿ ಸುದ್ದಿ ನೀಡಿದ ರಮೇಶ್ ಜಾರಕಿಹೊಳಿ: ಉಚಿತ ಚಿತ್ರ ಪ್ರದರ್ಶನಕ್ಕೆ ಅವಕಾಶ
ಹುಮ್ನಾಬಾದ್ ಪೊಲೀಸರ ಕಾರ್ಯಾಚರಣೆ: ಐಪಿಎಲ್ ಬುಕ್ಕಿಯ ಬಂಧನ
ಇಂಧನ ಬೆಲೆ ಇಳಿಕೆ ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ‘
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಗೆ ದುಷ್ಕರ್ಮಿಗಳ ದಾಳಿ: ಸಿಸಿಟಿವಿ, ಭದ್ರತಾ ಗೋಡೆ ಧ್ವಂಸ
ಬಿಎಸ್‌ವೈ ರಾಜ್ಯ ರಾಜಕೀಯದಲ್ಲಿ ಶ್ರೀಕೃಷ್ಣ ಪಾತ್ರ ವಹಿಸಲಿದ್ದಾರೆ: ಶಾಸಕ ಎನ್.ಮಹೇಶ್