ವಿದ್ಯುತ್ ದರ ಏರಿಕೆ: ಕಾಂಗ್ರೆಸ್ ತಂದ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ: ಸಚಿವ ಸುನೀಲ್ ಕುಮಾರ್
ಉಡುಪಿ: 2014ರಲ್ಲಿ ಕಲ್ಲಿದ್ದಲಿನ ಬೇರೆಯ ಹೊಂದಾಣಿಕೆಗೋಸ್ಕರ ನಿಯಮಾವಳಿ ರೂಪಿಸಲಾಗಿತ್ತು, ಹಿಂದಿನ ನಿಯಮಾವಳಿಯೇ ಮುಂದುವರಿಯುತ್ತಿದೆ. ನಮ್ಮ ಸರಕಾರ ಯಾವುದೇ ಹೊಸ ನಿಯಮಾವಳಿ ಮಾಡಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ನಿಯಮಾವಳಿ ಬಗ್ಗೆ ಮರುಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ದರ ಹೊಂದಾಣಿಕೆ ಮಾಡುವ ನಿಯಮದ ಬಗ್ಗೆ ಮರು ಚಿಂತನೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಗ್ರಾಹಕರಿಗೆ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ನನಗೂ ಅನ್ನಿಸಿದೆ. ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ ಬಾದಕಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಗತ್ಯ ಬಿದ್ದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka