ಶೆಡ್ ಮತ್ತು ಕಾರಿನ ಮೇಲೆ ಕಾಡಾನೆ ದಾಳಿ: ಆನೆ ಭೀತಿಯಿಂದ ತೋಟದ ಕೆಲಸಕ್ಕೆ ಹೋಗಲು ಜನ ಹಿಂದೇಟು - Mahanayaka
7:28 AM Saturday 14 - December 2024

ಶೆಡ್ ಮತ್ತು ಕಾರಿನ ಮೇಲೆ ಕಾಡಾನೆ ದಾಳಿ: ಆನೆ ಭೀತಿಯಿಂದ ತೋಟದ ಕೆಲಸಕ್ಕೆ ಹೋಗಲು ಜನ ಹಿಂದೇಟು

indian elephant
05/07/2023

ಮೂಡಿಗೆರೆ:  ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕೆ ಗ್ರಾಮದಲ್ಲಿ ಮನೆಯ ಪಕ್ಕದ ಶೆಡ್‍ ಗೆ ಕಾಡಾನೆಯೊಂದು ನುಗ್ಗಿ ಶೆಡ್ ನಲ್ಲಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮಂಗಳವಾರ ರಾತ್ರಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಹೇರಿಕೆ ಗ್ರಾಮದ ಮಹೇಶ್ ಎಂಬುವವರ ಮನೆ ಬಳಿ ಬಂದು ಕಾರ್ ಶೆಡ್ಡನ್ನು ಜಖಂಗೊಳಿಸಿದ್ದಲ್ಲದೇ ಶೆಡ್‍ ನಲ್ಲಿ ನಿಲ್ಲಿಸಿದ್ದ ಮಾರುತಿ ಇಗ್ನಿಷ್  ಕಾರಿನ ಹಿಂಭಾಗದ ಗ್ಲಾಸನ್ನು ಸಂಪೂರ್ಣ ಪುಡಿ ಮಾಡಿದೆ.  ಸ್ಥಳಕ್ಕೆ  ಮೂಡಿಗೆರೆಯ ಅರಣ್ಯ ಇಲಾಖೆ ಆನೆ ಕಾರ್ಯಪಡೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಊರುಬಗೆ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ ಸುಮಾರು 4 ಕಾಡಾನೆಗಳು ಸತತವಾಗಿ ಗ್ರಾಮದೊಳಗೆ ದಾಳಿಯಿಡುತ್ತಿವೆ. ಹಗಲು ರಾತ್ರಿಯೆನ್ನದೇ ರಸ್ತೆಯಲ್ಲಿ, ಕಾಫಿ ತೋಟದಲ್ಲಿ ಓಡಾಡುತ್ತಿವೆ.

ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕಾಡಾನೆಗಳನ್ನು ನಿಯಂತ್ರಿಸುವಂತೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಡ್ ಮತ್ತು ಕಾರು ಜಖಂ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ:

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ