ಪೊರಕೆ ಕಡ್ಡಿ ಸಂಗ್ರಹಣೆಗಾಗಿ ತೆರಳಿದ್ದ ವೇಳೆ ಆನೆ ದಾಳಿ: ವ್ಯಕ್ತಿಯ ದಾರುಣ ಸಾವು
ಚಾಮರಾಜನಗರ: ಆನೆ ದಾಳಿಯಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮ ಪಿ.ಜಿ.ಪಾಳ್ಯ ಅರಣ್ಯ ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಸುಮಾರು 5 ಗಂಟೆಗೆ ನಡೆದಿದೆ.
ಪ್ರಭುಸ್ವಾಮಿ(55 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತಪಟ್ಟಿರುವ ಪ್ರಭುಸ್ವಾಮಿ ಮತ್ತು ಆತನ ಮಗ ಚಂದ್ರು ಇಬ್ಬರೂ ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಮಲೆಮಹದೇಶ್ವರ ವನ್ಯಜೀವಿಧಾಮಕ್ಕೆ ಸೇರಿದ ಪಿ.ಜಿ. ಪಾಳ್ಯ ವಲಯ ಅರಣ್ಯ ವ್ಯಾಪ್ತಿಯ ಆಲದಕೆರೆ ದೊಡ್ಡಿ ಅರಣ್ಯ ಪ್ರದೇಶಕ್ಕೆ ಹೋಗಿ ವೇಳೆ ಆನೆ ದಾಳಿ ಮಾಡಿದೆ.
ಆನೆಯ ದಾಳಿಯ ಪರಿಣಾಮ ಪ್ರಭುಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw