ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಕಾಡಾನೆ ದಾಳಿ: ಹಸು ಸಾವು - Mahanayaka

ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಕಾಡಾನೆ ದಾಳಿ: ಹಸು ಸಾವು

mudigere
15/07/2023

ಕೊಟ್ಟಿಗೆಹಾರ:  ಮೇಯಲು ಕಟ್ಟಿ ಹಾಕಿದ್ದ ಹಸುವಿನ  ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಹಸು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದ ಬೋಬೇಗೌಡ ಎಂಬುವರ ತೋಟದಲ್ಲಿ ಈ ಘಟನೆ ನಡೆದಿದೆ.

ತೋಟಕ್ಕೆ ನುಗ್ಗಿದ ಕಾಡಾನೆ ದಾಂದಲೆ ನಡೆಸಿದ್ದು, ಅಡಿಕೆ-ತೆಂಗಿನ ಮರಗಳನ್ನ ಬುಡಸಮೇತ ಕಿತ್ತು ಹಾಕಿದೆ. ಸ್ಥಳಕ್ಕೆ ಪಶು ವೈದ್ಯ, ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಲ್ಲಿ ದಿನದಿಂದ ದಿನಕ್ಕೆ ಕಾಡಾನೆ ದಾಂದಲೆ ಹೆಚ್ಚುತ್ತಿದ್ದು, ಕಾಡಾನೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮಲೆನಾಡಿಗರು ಆಗ್ರಹಿಸಿದ್ದಾರೆ.




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ